ಮುಲ್ಕಿ: ರಾಜ್ಯ ಗಣಿ ವಿಜ್ಞಾನ ಮತ್ತು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ರವರು ಮುಲ್ಕಿ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಚಿವರಿಗೆ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ಮಾಧ್ಯಮದವರು ಬಿಜೆಪಿ ಶಾಸಕರನ್ನು ಸದನದಿಂದ ಅನರ್ಹಗೊಳಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಸದನದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವುದು ಸರಿಯಾದ ಕ್ರಮ. ಕಾನೂನಿಗೆ ಯಾರೂ ಅತೀತರಲ್ಲ ಎಂದು ಸರಕಾರದ ನಡೆಯನ್ನು ಸಮರ್ಥಿಸಿಕೊಂಡರು. ಗಲಾಟೆ ಮಾಡಿದ ಯಾರೇ ಅದರೂ ಶಿಕ್ಷೆಗೆ ಅರ್ಹರು. ರೀತಿ ರಿವಾಜುಗಳಂತೆ ನಡೆದುಕೊಳ್ಳಬೇಕು. ಅದನ್ನೂ ಮೀರಿದರೆ ಅಮಾನತು ಸಹಜ ಎಂದವರು ಹೇಳಿದರು. ಸರಕಾರದ 5 ಗ್ಯಾರಂಟಿಗಳು ಜನಮೆಚ್ಚುಗೆಗಳಿಸಿದೆ. ಬರುವ ದಿನಗಳಲ್ಲಿ ಸರಕಾರ ತೋಟಗಾರಿಕೆ ಹಾಗೂ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಲಿದೆ. ಅಕ್ರಮ ಮರಳುಗಾರಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ಕಾನೂನು ಬಿಗಿಗೊಳಿಸಲು ಅಧಿಕಾರಿಗಳಿಗೆ ತಾವು ಸೂಚಿಸಿದ್ದಾಗಿ ಹೇಳಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಎನ್.ಎಸ್.ಮನೋಹರ ಶೆಟ್ಟಿ, ಕ.ಸಾ.ಪ.ಮಾಜೀ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಮುಖ್ಯ ಕಾರ್ಯನಿಹಣಾಧಿಕಾರಿ ಜಯಮ್ಮ ಪಿ., ತೋಟಗಾರಿಕಾ ಇಲಾಖಾ ಅಧಿಕಾರಿ ಕೆ.ಪ್ರವೀಣ್, ನ ಪಂ ಸದಸ್ಯ ಬಾಲಚಂದ್ರ ಕಾಮತ್, ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…