ಜನ ಮನದ ನಾಡಿ ಮಿಡಿತ

Advertisement

ಕಡಬ: ರೈಲ್ವೇ ಟ್ರಾಕ್‌ನಲ್ಲಿ ಅಣ್ಣನಿಗೆ ಪೆಟ್ರೋಲ್ ಸುರಿದ ತಮ್ಮ..??!

ಹುಟ್ಟುತ್ತಾ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತು ಈ ಪ್ರಕರಣದಲ್ಲಿ ನಿಜವಾಗಿ ಬಿಟ್ಟಿದೆ. ರೈಲ್ವೇ ಟ್ರಾಕ್‌ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೊರಿಯರ್ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಯುವಕನನ್ನು 45ರ ಪ್ರಾಯದ ಹನುಮಂತಯ್ಯ ಎಂದು ಗುರುತಿಸಲಾಗಿದೆ.

ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮದ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದಾರೆ. ರೈಲು ಹೋದ ಬಳಿಕ ಸುಮಾರು 500_ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಅಣ್ಣನ ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ. ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ. ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ಲಿಂಗಪ್ಪ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.

 

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!