ಹುಟ್ಟುತ್ತಾ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತು ಈ ಪ್ರಕರಣದಲ್ಲಿ ನಿಜವಾಗಿ ಬಿಟ್ಟಿದೆ. ರೈಲ್ವೇ ಟ್ರಾಕ್‌ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೊರಿಯರ್ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಯುವಕನನ್ನು 45ರ ಪ್ರಾಯದ ಹನುಮಂತಯ್ಯ ಎಂದು ಗುರುತಿಸಲಾಗಿದೆ.
ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮದ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದಾರೆ. ರೈಲು ಹೋದ ಬಳಿಕ ಸುಮಾರು 500_ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಅಣ್ಣನ ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ. ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ. ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ಲಿಂಗಪ್ಪ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…