ಮಂಗಳೂರು ನಗರ ಪೊಲೀಸ್ ಕಮಿಶನರೇಟ್ ವ್ಯಾಪ್ತಿಯ ಬಜ್ಪೆ ಸಮೀಪದ ಕಿನ್ನಿಪದವಿನಲ್ಲಿ ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಕೇಂದ್ರದ ಈ ಕ್ರಮವನ್ನು ಬಿ.ಜೆ.ಪಿ. ನಾಯಕರು ಸ್ವಾಗತಿಸಿದ್ದಾರೆ.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಬೇಕು ಎಂಬ ಬೇಡಿಕೆ ಸಾರ್ವಜನಿಕ ಮತ್ತು ರಾಜಕೀಯ ವಲಯದಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವ ಆದೇಶವನ್ನು ಅಧಿಕೃತವಾಗಿ ಹೊರಡಿಸಿದೆ. ಇದೀಗ ಎನ್‌ಐಎ ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಲಿದೆ. ಮೇ.1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬ0ಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ತನಿಖೆಗೆ ವಹಿಸಿರುವುದನ್ನು ಸ್ವಾಗತಿಸಿರುವ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರು ಸುಹಾಸ್ ಶೆಟ್ಟಿ ಹತ್ಯೆಯ ಸಂಪೂರ್ಣ ವಿವರಗಳು ಎನ್‌ಐಎ ತನಿಖೆಯಿಂದ ಬಯಲಾಗಲಿದೆ ಎಂದು ತಿಳಿಸಿದ್ದಾರೆ.
ಘಟನೆ ನಡೆದ ದಿನದಿಂದಲೇ ಎನ್‌ಐಎ ತನಿಖೆ ನಡೆಸುವಂತೆ ಒತ್ತಾಯ ಮಾಡುತ್ತಲೇ ಇದ್ದೆವು. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರದ ತನಿಖಾ ವಿಧಾನವೂ ಏಕಪಕ್ಷೀಯವಾಗಿತ್ತು. ಹಿಂದೂ ಕಾರ್ಯಕರ್ತರನ್ನು ವಿನಾಕಾರಣ ಗುರಿಯಾಗಿಸಿ ಎಫ್ ಐಆರ್ ದಾಖಲಿಸುವುದು, ದ್ವೇಷದ ಗಡಿಪಾರು ಶಿಕ್ಷೆ ಇತ್ಯಾದಿ ಕ್ರಮಗಳನ್ನು ಸರ್ಕಾರ ಕೈಗೊಂಡಿತ್ತು. ಮಂಗಳೂರಿಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು ಏಕಪಕ್ಷೀಯವಾಗಿ ಹಿಂದೂ ಸಂಘಟನೆಯ ಮೇಲೆ ಆರೋಪ ಹೊರಿಸಿದ್ದರು ಎಂದು ಅವರು ಹೇಳಿದರು. ರಾಜ್ಯ ಸರ್ಕಾರದ ತನಿಖೆಯಿಂದ ನ್ಯಾಯ ಸಿಗುವುದಿಲ್ಲ ಎಂಬುದು ಸ್ಪಷ್ಟವಾಗಿತ್ತು ಎಂದ ಅವರು, ಇದೆಲ್ಲದಕ್ಕೂ ಎನ್ ಐಎ ತನಿಖೆಯಿಂದ ಉತ್ತರ ಲಭಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿ ಸುಹಾಸ್ ಶೆಟ್ಟಿ ಹಂತಕರಿಗೆ ಶಿಕ್ಷೆಯಾಗಲಿದೆ ಎಂದಿದ್ದಾರೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿರುವುದನ್ನು ದಕ್ಷಿಣ ಕನ್ನಡ ಸಂಸದ. ಬ್ರಿಜೇಶ್ ಚೌಟ ಸ್ವಾಗತಿಸಿದ್ದಾರೆ.
ಸುಹಾಸ್ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಬೆನ್ನಲ್ಲೇ ಅಂದರೆ ಮೇ 2ರಂದು ಕ್ಯಾಪ್ಟನ್ ಚೌಟ ಅವರು, ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದೆ ಇಸ್ಲಾಮಿಕ್ ಮೂಲಭೂತವಾದಿಗಳ ಕೈವಾಡದ ಬಗ್ಗೆ ಶಂಕೆಯಿರುವ ಕಾರಣ ಅದನ್ನು ತುರ್ತಾಗಿ ಎನ್‌ಐಎ ಸಂಸ್ಥೆಗೆ ವಹಿಸುವಂತೆ ಕೋರಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಸುದೀರ್ಘ ಪತ್ರ ಬರೆದಿದ್ರು. ಈ ಪತ್ರ ಬರೆದು ಒಂದು ತಿಂಗಳಾಗುತ್ತಿದ್ದ0ತೆ ಸುಹಾಸ್ ಶೆಟ್ಟಿ ಹತ್ಯೆಯ ಗಂಭೀರತೆ ಹಾಗೂ ಅದರ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆ ಕೈವಾಡವಿರುವ ಅನುಮಾನದ ಮೇಲೆ ಇಡೀ ಪ್ರಕರಣವನ್ನು ಈಗ ಕೇಂದ್ರ ತನಿಖಾ ಸಂಸ್ಥೆಯಾದ ಎನ್‌ಐಎಗೆ ವಹಿಸಲಾಗಿದೆ. ಅಲ್ಲದೆ, ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರ ಕೈವಾಡದ ಸಾಧ್ಯತೆ ಇರುವುದರಿಂದ ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅತ್ಯಗತ್ಯ. ಎಂದೂ ಚೌಟ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣವನ್ನು ಕೂಡ ಎನ್‌ಐಎಗೆ ವಹಿಸಿದ ಕಾರಣ ಇಲ್ಲಿವರೆಗೆ ಪಿಎಫ್‌ಐ ಸಂಘಟನೆಯ ಹಲವರನ್ನು ಜೈಲಿಗೆ ಅಟ್ಟುವುದಕ್ಕೆ ಸಾಧ್ಯವಾಗಿದೆ. ಪ್ರವೀಣ್ ಕೊಲೆಯ ಹಿಂದೆ ಈ ಜಿಹಾದ್ ಮೂಲಭೂತವಾದಿಗಳು ಹಾಗೂ ಸ್ಲೀಪರ್ ಸೆಲ್‌ಗಳು ವ್ಯವಸ್ಥಿತ ಸಂಚು ರೂಪಿಸಿ ಹಣದ ಫಂಡಿ0ಗ್ ಮಾಡಿಸಿರುವ ವಿಚಾರ ತನಿಖೆಯಿಂದ ಗೊತ್ತಾಗಿದೆ. ಹೀಗಿರುವಾಗ, ಸುಹಾಸ್ ಶೆಟ್ಟಿ ಹತ್ಯೆಯನ್ನು ಕೂಡ ಇದೀಗ ಎನ್‌ಐಎಗೆ ವಹಿಸಿರುವುದರಿಂದ ಇಸ್ಲಾಮಿಕ್ ಮೂಲಭೂತವಾದಿ ಶಕ್ತಿಗಳ ನೆಟ್ವರ್ಕ್, ಆರ್ಥಿಕವಾಗಿ ಯಾರೆಲ್ಲ ಸಹಾಯ ಮಾಡಿದ್ದಾರೆ ಎನ್ನುವುದು ಬಯಲಾಗಲಿದೆ’ ಎಂದೂ ಸಂಸದರು ಹೇಳಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…