ಕರಾವಳಿ

ಮಂಗಳೂರು: ಎನ್‌ಐಗೆ ಸುಹಾಸ್ ಪ್ರಕರಣ ;ಸತ್ಯಾಂಶಗಳು ಹೊರಬೀಳಲಿವೆ..?

ಮಂಗಳೂರು ನಗರ ಪೊಲೀಸ್ ಕಮಿಶನರೇಟ್ ವ್ಯಾಪ್ತಿಯ ಬಜ್ಪೆ ಸಮೀಪದ ಕಿನ್ನಿಪದವಿನಲ್ಲಿ ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿದೆ. ಕೇಂದ್ರದ ಈ ಕ್ರಮವನ್ನು ಬಿ.ಜೆ.ಪಿ. ನಾಯಕರು ಸ್ವಾಗತಿಸಿದ್ದಾರೆ.


ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಬೇಕು ಎಂಬ ಬೇಡಿಕೆ ಸಾರ್ವಜನಿಕ ಮತ್ತು ರಾಜಕೀಯ ವಲಯದಿಂದ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸುವ ಆದೇಶವನ್ನು ಅಧಿಕೃತವಾಗಿ ಹೊರಡಿಸಿದೆ. ಇದೀಗ ಎನ್‌ಐಎ ಬಂಧಿತ ಆರೋಪಿಗಳನ್ನು ವಶಕ್ಕೆ ಪಡೆದು, ಹೆಚ್ಚಿನ ವಿಚಾರಣೆ ನಡೆಸಲಿದೆ. ಮೇ.1ರಂದು ರಾತ್ರಿ ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಬರ್ಬರವಾಗಿ ತಲ್ವಾರಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಪ್ರಕರಣ ಸಂಬ0ಧ ಪೊಲೀಸರು ಈವರೆಗೆ 11 ಜನರನ್ನು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ತನಿಖೆಗೆ ವಹಿಸಿರುವುದನ್ನು ಸ್ವಾಗತಿಸಿರುವ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಅವರು ಸುಹಾಸ್ ಶೆಟ್ಟಿ ಹತ್ಯೆಯ ಸಂಪೂರ್ಣ ವಿವರಗಳು ಎನ್‌ಐಎ ತನಿಖೆಯಿಂದ ಬಯಲಾಗಲಿದೆ ಎಂದು ತಿಳಿಸಿದ್ದಾರೆ.

ಘಟನೆ ನಡೆದ ದಿನದಿಂದಲೇ ಎನ್‌ಐಎ ತನಿಖೆ ನಡೆಸುವಂತೆ ಒತ್ತಾಯ ಮಾಡುತ್ತಲೇ ಇದ್ದೆವು. ಅದಕ್ಕೆ ತಕ್ಕಂತೆ ರಾಜ್ಯ ಸರ್ಕಾರದ ತನಿಖಾ ವಿಧಾನವೂ ಏಕಪಕ್ಷೀಯವಾಗಿತ್ತು. ಹಿಂದೂ ಕಾರ್ಯಕರ್ತರನ್ನು ವಿನಾಕಾರಣ ಗುರಿಯಾಗಿಸಿ ಎಫ್ ಐಆರ್ ದಾಖಲಿಸುವುದು, ದ್ವೇಷದ ಗಡಿಪಾರು ಶಿಕ್ಷೆ ಇತ್ಯಾದಿ ಕ್ರಮಗಳನ್ನು ಸರ್ಕಾರ ಕೈಗೊಂಡಿತ್ತು. ಮಂಗಳೂರಿಗೆ ಭೇಟಿ ನೀಡಿದ ಕಾಂಗ್ರೆಸ್ ನಾಯಕರು ಏಕಪಕ್ಷೀಯವಾಗಿ ಹಿಂದೂ ಸಂಘಟನೆಯ ಮೇಲೆ ಆರೋಪ ಹೊರಿಸಿದ್ದರು ಎಂದು ಅವರು ಹೇಳಿದರು. ರಾಜ್ಯ ಸರ್ಕಾರದ ತನಿಖೆಯಿಂದ ನ್ಯಾಯ ಸಿಗುವುದಿಲ್ಲ ಎಂಬುದು ಸ್ಪಷ್ಟವಾಗಿತ್ತು ಎಂದ ಅವರು, ಇದೆಲ್ಲದಕ್ಕೂ ಎನ್ ಐಎ ತನಿಖೆಯಿಂದ ಉತ್ತರ ಲಭಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿ ಸುಹಾಸ್ ಶೆಟ್ಟಿ ಹಂತಕರಿಗೆ ಶಿಕ್ಷೆಯಾಗಲಿದೆ ಎಂದಿದ್ದಾರೆ. ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿರುವುದನ್ನು ದಕ್ಷಿಣ ಕನ್ನಡ ಸಂಸದ. ಬ್ರಿಜೇಶ್ ಚೌಟ ಸ್ವಾಗತಿಸಿದ್ದಾರೆ.

ಸುಹಾಸ್ ಶೆಟ್ಟಿ ಅವರನ್ನು ಬಜಪೆಯಲ್ಲಿ ನಡುರಸ್ತೆಯಲ್ಲೇ ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಬೆನ್ನಲ್ಲೇ ಅಂದರೆ ಮೇ 2ರಂದು ಕ್ಯಾಪ್ಟನ್ ಚೌಟ ಅವರು, ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಇದರ ಹಿಂದೆ ಇಸ್ಲಾಮಿಕ್ ಮೂಲಭೂತವಾದಿಗಳ ಕೈವಾಡದ ಬಗ್ಗೆ ಶಂಕೆಯಿರುವ ಕಾರಣ ಅದನ್ನು ತುರ್ತಾಗಿ ಎನ್‌ಐಎ ಸಂಸ್ಥೆಗೆ ವಹಿಸುವಂತೆ ಕೋರಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಸುದೀರ್ಘ ಪತ್ರ ಬರೆದಿದ್ರು. ಈ ಪತ್ರ ಬರೆದು ಒಂದು ತಿಂಗಳಾಗುತ್ತಿದ್ದ0ತೆ ಸುಹಾಸ್ ಶೆಟ್ಟಿ ಹತ್ಯೆಯ ಗಂಭೀರತೆ ಹಾಗೂ ಅದರ ಹಿಂದೆ ನಿಷೇಧಿತ ಪಿಎಫ್‌ಐ ಸಂಘಟನೆ ಕೈವಾಡವಿರುವ ಅನುಮಾನದ ಮೇಲೆ ಇಡೀ ಪ್ರಕರಣವನ್ನು ಈಗ ಕೇಂದ್ರ ತನಿಖಾ ಸಂಸ್ಥೆಯಾದ ಎನ್‌ಐಎಗೆ ವಹಿಸಲಾಗಿದೆ. ಅಲ್ಲದೆ, ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತರ ಕೈವಾಡದ ಸಾಧ್ಯತೆ ಇರುವುದರಿಂದ ಈ ಕುರಿತು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿರುವುದು ಅತ್ಯಗತ್ಯ. ಎಂದೂ ಚೌಟ ಹೇಳಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣವನ್ನು ಕೂಡ ಎನ್‌ಐಎಗೆ ವಹಿಸಿದ ಕಾರಣ ಇಲ್ಲಿವರೆಗೆ ಪಿಎಫ್‌ಐ ಸಂಘಟನೆಯ ಹಲವರನ್ನು ಜೈಲಿಗೆ ಅಟ್ಟುವುದಕ್ಕೆ ಸಾಧ್ಯವಾಗಿದೆ. ಪ್ರವೀಣ್ ಕೊಲೆಯ ಹಿಂದೆ ಈ ಜಿಹಾದ್ ಮೂಲಭೂತವಾದಿಗಳು ಹಾಗೂ ಸ್ಲೀಪರ್ ಸೆಲ್‌ಗಳು ವ್ಯವಸ್ಥಿತ ಸಂಚು ರೂಪಿಸಿ ಹಣದ ಫಂಡಿ0ಗ್ ಮಾಡಿಸಿರುವ ವಿಚಾರ ತನಿಖೆಯಿಂದ ಗೊತ್ತಾಗಿದೆ. ಹೀಗಿರುವಾಗ, ಸುಹಾಸ್ ಶೆಟ್ಟಿ ಹತ್ಯೆಯನ್ನು ಕೂಡ ಇದೀಗ ಎನ್‌ಐಎಗೆ ವಹಿಸಿರುವುದರಿಂದ ಇಸ್ಲಾಮಿಕ್ ಮೂಲಭೂತವಾದಿ ಶಕ್ತಿಗಳ ನೆಟ್ವರ್ಕ್, ಆರ್ಥಿಕವಾಗಿ ಯಾರೆಲ್ಲ ಸಹಾಯ ಮಾಡಿದ್ದಾರೆ ಎನ್ನುವುದು ಬಯಲಾಗಲಿದೆ’ ಎಂದೂ ಸಂಸದರು ಹೇಳಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…

5 hours ago

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…

1 day ago

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…

1 day ago

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…

1 day ago

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…

1 day ago

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…

1 day ago