ನದಿ ನೀರಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ ಶೆಟ್ಟಿ ಎಂಬವರ ಪುತ್ರ ಚೇತನ್ ಶೆಟ್ಟಿ ಮೃತಪಟ್ಟಿದ್ದಾರೆ. ಚೇತನ್ ಮಂಗಳೂರಿನಲ್ಲಿ ಮೆಡಿಕಲ್ ರೆಪ್ ಆಗಿ ಉದ್ಯೋಗದಲ್ಲಿದ್ದು. ರವಿವಾರ ಇಚ್ಲಂಪಾಡಿಯಲ್ಲಿ ಯುವಕರ ತಂಡ ಕ್ರಿಕೆಟ್ ಆಟವಾಡಿದ ಬಳಿ ಅಪರಾಹ್ನದ ವೇಳೆಗೆ ಇಚ್ಲಂಪಾಡಿಯ ಗುಂಡ್ಯ ಹೊಳೆಯಲ್ಲಿ ಚೇತನ್ ಸ್ನಾನಕ್ಕೆಂದು ನದಿಗೆ ಇಳಿದಿದ್ದಾನೆ. ಈ ವೇಳೆ ಚೇತನ್ ನೀರಿನ ಆಳ ಆರಿಯದೇ ನೀರಲ್ಲಿ ಮುಳುಗಿ ಮೃತರಾಗಿದ್ದಾರೆ.
ಬಳಿಕ ಸ್ಥಳೀಯರಾದ ಜಾಯ್ ಎಂಬವರು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನೀರಿನಿಂದ ಮೇಲೆತ್ತಿದ್ದು, ಈ ವೇಳೆಗಾಗಲೇ ಯುವಕ ಮೃತಪಟಿದ್ದಾನೆ. ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೇತನ್ ಅವರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ. ಚೇತನ್ ಉತ್ತಮ ಕಬಡ್ಡಿ, ಕ್ರಿಕೆಟ್ ಆಟಗಾರನಾಗಿ ಹೆಸರು ಗಳಿಸಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…