ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ನೀಡಲಾಗುವ ಪದ್ಮ ವಿಭೂಷಣ ಜಾರ್ಜ್ ಫೆರ್ನಾಂಡಿಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿಯನ್ನು ಉಡುಪಿ ಓಷಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸ್ವೀಕರಿಸಿ ಅವರು ಮಾತನಾಡಿದ್ರು. ದೇಶದಲ್ಲಿ ಹಗರಣಗಳು ನಡೆಯದಿದ್ದರೆ ದೇಶದ ಆರ್ಥಿಕ ಸ್ಥಿತಿ ಇನ್ನಷ್ಟು ಎತ್ತರಕ್ಕೆ ಹೋಗುತ್ತಿತ್ತು. ಈ ಹಗರಣಗಳಿಂದ ತೊಂದರೆ ಅನುಭವಿಸುವುದು ಸರಕಾರದಿಂದ ಸವಲತ್ತುಗಳನ್ನು ಪಡೆಯಬೇಕಾಗಿದ್ದ ಸಮಾಜದ ಕಟ್ಟಕಡೆಯ ವ್ಯಕ್ತಿ. ಇದರಿಂದ ಶ್ರೀಮಂತರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ ಕೋಟಿ ಕೋಟಿ ಹಗರಣಗಳು ನಡೆಯುತ್ತಿದ್ದರೆ ಮುಂದೆ ಸಮಾಜದಲ್ಲಿ ಶಾಂತಿ ಇರುವುದಿಲ್ಲ. ಯಾರಿಗೆ ಹಣ ಸೇರಬೇಕೊ ಅವರಿಗೆ ಹಣ ಸಿಗದಿದ್ದರೆ ಈ ದೇಶದಲ್ಲಿ ಕ್ರಾಂತಿ ಆಗಬಹುದು. ದೇಶದಲ್ಲಿ ಭಾಷೆ ಹಾಗೂ ಧರ್ಮದ ಆಧಾರದಲ್ಲಿ ಕ್ರಾಂತಿಯಾದರೆ 25ಕ್ಕೂ ಅಧಿಕ ಬೇರೆ ದೇಶಗಳ ಸೃಷ್ಠಿಯಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!