ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಆನ್‌ಲೈನ್ ಸಹಿ ಸಂಗ್ರಹ ಅಭಿಯಾನವನ್ನು ದಕ್ಷಿಣ ಕನ್ನಡ ಜಿಲ್ಲಾ ರೈಲು ಬಳಕೆದಾರರ ಸಮಿತಿ ಆರಂಭಿಸಿದೆ. ಕರಾವಳಿಯ ರೈಲು ಬಳಕೆದಾರರು ಕೈಜೋಡಿಸಿದ್ದು, ರೈಲು ಮಾರ್ಗವನ್ನು ಬದಲಾಯಿಸಿ ಪುನರಾರಂಭಿಸುವಂತೆ ಆಗ್ರಹಿಸಿದ್ದಾರೆ.

ದೇಶದ ಅತಿ ದೀರ್ಘ ಪ್ರಯಾಣದ ರೈಲುಗಳ ಪೈಕಿ 4ನೇ ಸ್ಥಾನ ಪಡೆದಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ತನ್ನ ಸೇವೆ ನಿಲ್ಲಿಸಿ ಆಗಲೇ 5 ವರ್ಷ ಕಳೆದಿದೆ. ಬಹು ಬೇಡಿಕೆಯ ಈ ರೈಲು ಸಂಚಾರ ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಆನ್‌ಲೈನ್ ಮೂಲಕ ಹಕ್ಕೊತ್ತಾಯ ಅಭಿಯಾನ ಆರಂಭಿಸಲಾಗಿದೆ. ಜೂ.6ರಂದು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ವರ್ಚುವಲ್ ಸಹಿ ಸಂಗ್ರಹ ಅಭಿಯಾನ ಆರಂಭಗೊಂಡಿದ್ದು, ಜುಲೈ 6 ರ ರಾತ್ರಿ 12 ಗಂಟೆಯ ತನಕ ನಡೆದಿದೆ. ಕರ್ನಾಟಕ ಕರಾವಳಿಯಿಂದ ಜಮ್ಮು ಮತ್ತು ಕಾಶ್ಮಿರಕ್ಕೆ ನೇರ ರೈಲು ಸೇವೆ ಪುನರಾರಂಭಿಸುವ ಉದ್ದೆಶದಿಂದ ಅಭಿಯಾನ ಆರಂಭಿಸಲಾಗಿದೆ. ಮಂಗಳೂರು ಸೆಂಟ್ರಲ್- ಶ್ರಿ?ಮಾತಾ ವೈಷ್ಣೊ?ದೇವಿ ಕತ್ರ ನವಯುಗ ಎಕ್ಸ್ಪ್ರೆಸ್ ರೈಲು 1990 ರಲ್ಲಿ ಮಂಗಳೂರಿನಿಂದ ಜಮ್ಮು ತಾವಿ ತನಕ ಸೇವೆ ನೀಡುತ್ತಿದ್ದು, 2015ರಲ್ಲಿ ಕತ್ರ ತನಕ ವಿಸ್ತರಿಸಲಾಗಿತ್ತು.

ಪ್ರತೀ ಸೋಮವಾರ ಸಂಜೆ 5 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ಉತ್ತರ ಪ್ರದೇಶ, ಹೊಸದಿಲ್ಲಿ, ಹರಿಯಾಣ, ಪಂಜಾಬ್ ಮೂಲಕ ಜಮ್ಮು ಮತ್ತು ಕಾಶ್ಮಿ?ರದ ಕತ್ರಕ್ಕೆ 13 ರಾಜ್ಯಗಳನ್ನು ಬಳಸಿಕೊಂಡು ತಲುಪುತ್ತಿತ್ತು. ಒಟ್ಟು 3686 ಕಿ.ಮಿ. ಕ್ರಮಿಸಲು 70 ಗಂಟೆ 5 ನಿಮಿಷ ಅವಧಿ ತೆಗೆದುಕೊಳ್ಳುತ್ತಿದ್ದ ರೈಲು ಪ್ರಯಾಣ ದೂರದ ಲೆಕ್ಕದಲ್ಲಿ ದೇಶದ 4ನೇ ದೊಡ್ಡ ರೈಲು ಎಂಬ ಖ್ಯಾತಿಗೆ ಪಾತ್ರವಾಗಿತ್ತು. ದಾರಿಯುದ್ದಕ್ಕೂ ದೇಶದ ಪ್ರಸಿದ್ಧ ಯಾತ್ರಾಸ್ಥಳಗಳನ್ನು ಸಂಪರ್ಕಿಸುತ್ತಿತ್ತು. 20 ಕೋಚ್‌ಗಳ ರೈಲಿಗೆ ಈರೋಡಿನಲ್ಲಿ ತಿರುನೆಲ್ವೆಲಿಯಿಂದ ಬರುವ ಸ್ಲಿಪ್ ಕೋಚ್‌ಗಳನ್ನು ಜೋಡಿಸಲಾಗುತ್ತಿತ್ತು. ಕೋವಿಡ್ ಕಾಲಘಟ್ಟದಲ್ಲಿ ದೇಶದ ಎಲ್ಲ ರೈಲು ಸೇವೆಗಳು ನಿಂತಿದ್ದು, ಬಳಿಕ ಒಂದೊಂದೇ ಪುನರಾರಂಭಗೊಂಡಿತ್ತು. ಆದರೆ ಮಂಗಳೂರು ಸೆಂಟ್ರಲ್- ಕತ್ರಾ ನವಯುಗ ಎಕ್ಸ್ಪ್ರೆಸ್ ಮಾತ್ರ ಹಳಿಗೆ ಮರಳಲೇ ಇಲ್ಲ. ತಿರುನೆಲ್ವೆಲಿಯಿಂದ ಇದ್ದ ಸ್ಲಿಪ್ ರೈಲನ್ನು ಮಾತ್ರ 20 ಕೋಚ್‌ಗಳ ಸ್ವತಂತ್ರ ರೈಲಾಗಿ ಪರಿವರ್ತಿಸಿ ಈಗ ಕತ್ರಾಕ್ಕೆ ಓಡಿಸಲಾಗುತ್ತಿದೆ.

ಇದರಿಂದಾಗಿ ಮಂಗಳೂರಿನಿಂದ ವೈಷ್ಣೊದೇವಿ ಸೇರಿದಂತೆ ದೇಶದ ಪ್ರಮುಖ ಯಾತ್ರಾಸ್ಥಳಗಳಿಗೆ ಹೋಗುತ್ತಿದ್ದ ಯಾತ್ರಿಗಳಿಗೆ ದೊಡ್ಡ ನಷ್ಟವಾಗಿದೆ. ಈ ಹಿಂದೆ ಮಂಗಳೂರು ಸೆಂಟ್ರಲ್‌ನಿಂದ ಕಾಸರಗೋಡು- ಪಾಲಕ್ಕಾಡ್ ಮೂಲಕ ನವಯುಗ ಎಕ್ಸ್ಪ್ರೆಸ್ ಸಂಚರಿಸುತ್ತಿದ್ದರೆ ಪ್ರಸ್ತುತ ರೂಟ್ ಬದಲಾಯಿಸಿ ಪುನರಾರಂಭಿಸಬೇಕೆಂಬುದು ಅಭಿಯಾನದ ಆಗ್ರಹ. ತಿರುನೆಲ್ವೆಲಿಯಿಂದ ಕತ್ರಕ್ಕೆ ಹೋಗುವ ರೈಲು ಸ್ವತಂತ್ರವಾಗಿ ಓಡುತ್ತಿರುವ ಕಾರಣ ಮಂಗಳೂರು ಸೆಂಟ್ರಲ್- ಶ್ರಿ? ಮಾತಾ ವೈಷ್ಣೊ?ದೇವಿ ಕತ್ರ ನವಯುಗ ಎಕ್ಸ್ಪ್ರೆಸ್ ರೈಲನ್ನು ಮಂಗಳೂರು- ಹಾಸನ- ಮೀರಜ್- ಪುಣೆ- ದಿಲ್ಲಿ ಮಾರ್ಗದಲ್ಲಿ ಓಡಿಸಬೇಕೆಂದು ಒತ್ತಾಯಿಸಲಾಗುತ್ತಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!