ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಹಿಂದೂ ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒಕ್ಕೂಟ ಒತ್ತಾಯಿಸಿತು.
ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದು ಮನವಿ ನೀಡಲು ಬಂದಾಗಲೂ ಉಡುಪಿ ಡಿಸಿ ಗೈರು ಹಾಜರಾಗಿದ್ದ ಬಗ್ಗೆ ಒಕ್ಕೂಟದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ರು. ಹಿಂದೂ ಕಾರ್ಯಕರ್ತರ ಖಾಸಗಿ ಜೀವನದ ವ್ಯಕ್ತಿತ್ವದ ಗೌರವವನ್ನು, ಘನತೆಯನ್ನು ಹಾಳು ಮಾಡಲಾಗುತ್ತಿದೆ. ಕೋಮು ಸೌಹಾರ್ದ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ದೂರಿದರು. ಮಧ್ಯರಾತ್ರಿ ಕಾರ್ಯಕರ್ತರ ಮನೆಗೆ ತೆರಳಿ ವಿಚಾರಣೆ ನಡೆಸುವುದು ಫೋಟೋ ತೆಗೆಯುವುದು ಸರಿಯಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಏನೇ ಬರೆದರು ಹಿಂದೂ ಕಾರ್ಯಕರ್ತರನ್ನು ಬಂಧನ ಮಾಡಲಾಗುತ್ತಿದೆ ಎಂದು ಅಕ್ಷೇಪಿಸಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ವಿಷಯದಲ್ಲಿ ಉನ್ನತ ಮಠದ ತನಿಖೆ ಆಗಬೇಕು, ಪೊಲೀಸರಿಂದ ಕಿರುಕುಳಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಪರಿಹಾರ ನೀಡಿ ಪೊಲೀಸರು ಲಿಖಿತ ಕ್ಷಮಾಪಣೆ ಕೇಳಬೇಕು ಎಂದು ಒತ್ತಾಯಿಸಿದ್ರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…