ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪಿ ಎಲ್ ಧರ್ಮ ಮಡಿಕೇರಿಯ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಮಡಿಕೇರಿ ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕುಲಪತಿ ದೀಪಾ ಭಾಸ್ತಿ ಹಾಗು ಮನೆಯವರೊಡನೆ ಮಾತನಾಡಿ 2004 ರಿಂದ 2006 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿದ ದೀಪಾ ಭಾಸ್ತಿ ಅವರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ.
ಕಾಲೇಜಿನ ದಿನಗಳಿಂದಲೂ ಸಾಹಿತ್ಯದ ಆಸಕ್ತಿ ಹೊಂದಿದ್ದ ದೀಪಾ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು ಬಹಳ ವಿಶೇಷವಾದುದು ಎಂದರು. ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಇದೇ ಸಂದರ್ಭ ಕುಲಪತಿ ಅಭಿನಂದಿಸಿದರು. ಹಾಗು ಇದೇ ಸಂದರ್ಭದಲ್ಲಿ ದೀಪಾ ಭಾಸ್ತಿಯವರನ್ನು ವಿಶ್ವವಿದ್ಯಾನಿಲಯಕ್ಕೆ ಆಹ್ವಾನಿಸಿದರು.
ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ದೀಪಾ ಭಾಸ್ತಿ ಅವರು ಕಾಲೇಜಿನ ದಿನಗಳಿಂದಲೇ ಪರಿಚಿತರು, ಇಂದು ಕನ್ನಡದ ಹಣತೆ ವಿಶ್ವ ಮಟ್ಟದಲ್ಲಿ ರಾರಾಜಿಸುತ್ತಿದೆ ಎಂದರೆ ಅದಕ್ಕೆ ದೀಪಾ ಭಾಸ್ತಿ ಅವರ ಕೊಡುಗೆಯೂ ಬಹು ಮುಖ್ಯ ಕಾರಣ ಎಂದರು ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಕೊಡಗು ಕನ್ನಡ ಭವನದ ನಿರ್ದೇಶಕ ಅರುಣ್ ಕುಮಾರ್ ಪಿ. ಹಾಜರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…