ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹೈಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಇನ್ನುಳಿದ 18 ಮಂದಿಯನ್ನು ರಕ್ಷಿಸಲಾಗಿದ್ದು, ಅವರನ್ನು ಹೊತ್ತ ಭಾರತೀಯ ನೌಕಾಪಡೆಯ ಐಎನ್‌ಎಸ್ ಸೂರತ್ ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದೆ.

22 ಸಿಬ್ಬಂದಿಗಳಲ್ಲಿ 18 ಜನರನ್ನು ಭಾರತೀಯ ನೌಕಾಪಡೆಯ ನೌಕೆ ಐಎನ್‌ಎಸ್ ಸೂರತ್ ರಕ್ಷಿಸಿದೆ. ಆದರೆ 4 ಸಿಬ್ಬಂದಿ ಇನ್ನೂ ಕಾಣೆಯಾಗಿದ್ದಾರೆ. ಐದು ಸಿಬ್ಬಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ಚಿಕಿತ್ಸೆ ನೀಡಲು ಎಲ್ಲಾ ಸಂಬ0ಧಪಟ್ಟ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ.



