ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾದ ಅಡಿಕೆ ವ್ಯಾಪಾರಿ

ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ಪ್ರತಿಯೊಬ್ಬರು ಕೂಡ ಅಡಿಕೆ ವ್ಯಾಪಾರಿ ಬಂಟ್ವಾಳ ಬಡ್ಡಕಟ್ಟೆಯಲ್ಲಿ ಎ.ಬಿ.ಸುಫಾರಿ ಅಂಗಡಿಯನ್ನು ಹೊಂದಿರುವ ನಾವೂರ ಗ್ರಾಮದ ಮೈಂದಾಳ ನಿವಾಸಿ ನೌಫಲ್ ಎನ್.ವಿರುದ್ದ ದೂರು ನೀಡಿದ್ದಾರೆ. ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಕೃಷಿಕರೆಲ್ಲರು ಒಂದಾಗಿ ಆತನ ವಿರುದ್ದ ದೂರು ನೀಡಲು ಮುಂದಾಗಿದ್ದಾರೆ. ಈತ ಸ್ಥಳೀಯ ಕೃಷಿಕರ ವಿಶ್ವಾಸಾರ್ಹ ವರ್ತಕನಾಗಿದ್ದು, ಕಳೆದ ಎರಡು ಮೂರು ದಶಕಗಳಿಂದ ಕೃಷಿಕರು ಈತನಿಗೆ ಒಣ ಅಡಿಕೆ ನೀಡಿ ಸ್ವಲ್ಪ ಸಮಯದ ಬಳಿಕ ಹಣ ನೀಡುತ್ತಿದ್ದರು. ಆತ ಯಾವುದೇ ರೀತಿಯಲ್ಲಿ ವಂಚಿಸದೆ ಕೃಷಿಕರ ಅಗತ್ಯಕ್ಕೆ ತಕ್ಕಂತೆ ಹಣ ನೀಡುತ್ತಿದ್ದನು. ಆದರೆ ಈ ಬಾರಿ ಒಬ್ಬಬ್ಬ ಕೃಷಿಕನಿಗೆ ಲಕ್ಷಾಂತರ ರೂ ಹಣ ವಂಚನೆ ಮಾಡಿದ್ದು ಒಟ್ಟು ಮೊತ್ತ 10 ಕೋಟಿ ಆಗಬಹುದೆಂದು ಕೃಷಿಕರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!