ಕೋಡಿಂಬಾಳ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಹನುಮಪ್ಪ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಮಂಗಳೂರು-ಬೆ0ಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪ ಕೋರಿಯರ್ ರೈಲು ಟ್ರಾಕ್ ಬಳಿ ಘಟನೆ ನಡೆದಿತ್ತು. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ ತನ್ನ ತಮ್ಮನಿಂದಲೇ ಕೊಲೆಯಾಗಿದ್ದಾನೆ. ಸಹೋದರ ನಿಂಗಪ್ಪನನ್ನ ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.

ಇನ್ಸ್ಪೆಕ್ಟರ್ ಜಯಾನಂದ, ಎಎಸ್‌ಐ ಮಧುಚಂದ್ರ, ವಿಧಿವಿಜ್ಞಾನ ತಂಡ ಹಾಗೂ ರೈಲ್ವೆ ಪೊಲೀಸರಿಂದ ತನಿಖೆ ನಡೆದಿದೆ.ವಿಪರೀತ ಕುಡಿತದ ಚಟವಿದ್ದ ಮೃತ ಹನುಮಪ್ಪನ ಹೆಂಡತಿ 14ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದಾಳೆ. ಇತ್ತೀಚೆಗೆ ಕುಡಿದ ಮತ್ತಿನಲ್ಲಿ ನಮ್ಮ ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲು ಈತ ಯತ್ನಿಸಿದ್ದ. ಈ ಹಿನ್ನಲೆ ಹಿಂಸೆಯಿ0ದ ರೋಸಿಹೋಗಿ ನಿಂಗಪ್ಪ ತನ್ನ ಅಣ್ಣನನ್ನು ಕೊಲೆ ಮಾಡಲು ನಿರ್ಧರಿಸಿದ್ದೆ ಎಂದು ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಇಂದು ಸ್ಥಳ ಮಹಜರು ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.



