ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮುಂದುವರೆದರೆ ತಕ್ಕ ಪ್ರತಿಫಲ ಎದುರಿಸಬೇಕಾದೀತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ, ಕಾನೂನಿನ ದುರ್ಬಳಕೆ ಮಾಡಿ ಏಕಪಕ್ಷೀಯವಾಗಿ ನಡೆಸುತ್ತಿರುವ ಬಲವಂತದ ಕ್ರಮಗಳ ಸಹಿತ ಇತ್ತೀಚಿನ ಘಟನಾವಳಿಗಳ ಬಗ್ಗೆ ಪರಾಮರ್ಶೆ ಮತ್ತು ಪರಿಶೀಲನೆ ನಡೆಸಲು ಜಿಲ್ಲೆಗೆ ಬಂದ ಬಿಜೆಪಿ ನಿಯೋಗದ ನೇತೃತ್ವ ವಹಿಸಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿದ್ರು. ನಮ್ಮ ಕಾರ್ಯಕರ್ತರು ಸಮಾಧಾನದಿಂದ ಇದ್ದಾರೆ ಎನ್ನುವುದನ್ನು ದೌರ್ಬಲ್ಯ ಎಂದುಕೊಳ್ಳಬೇಡಿ. ಕಾರ್ಯಕರ್ತರ ಮನೆಗೆ ಮಧ್ಯರಾತ್ರಿ ನುಗ್ಗಿ ಪೊಲೀಸರು ಗೂಂಡಾಗಿರಿ ಮಾಡುವುದನ್ನು ಮುಂದುವರಿಸಿದರೆ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ. ಆಂದೋಲನ ರೂಪಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು ಜಿಲ್ಲಾಡಳಿತ, ಎಸ್ಪಿ, ಕಮಿಷನರ್ ಭೇಟಿಯಾಗಿ ಇಲ್ಲಿಯ ಪರಿಸ್ಥಿತಿಯ ಕುರಿತು ಚರ್ಚಿಸಿದ್ದೇವೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಬಳಿಕ ಕಾನೂನು ಸುವ್ಯವಸ್ಥೆ ನೆಪದಲ್ಲಿ ಪೊಲೀಸ್ ಇಲಾಖೆ ಗೂಂಡಾ ವರ್ತನೆ ಮಾಡಲಾಗುತ್ತಿದೆ. ಕಾನೂನು ಮೀರಿದವರನ್ನು ದಂಡಿಸಿ ಆದರೆ ಓಲೈಕೆ ರಾಜಕಾರಣ ಬೇಡ ಎಂದಿದ್ದಾರೆ.



