ಜನ ಮನದ ನಾಡಿ ಮಿಡಿತ

Advertisement

ಸಂಕಲ್ಪದಿಂದ ಸಾಧನೆವರೆಗೆ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಕಿಶೋರ್ ಕುಮಾರ್ ಕುಂದಾಪುರ

ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ‘ಸಂಕಲ್ಪದಿಂದ ಸಾಧನೆವರೆಗೆ’ ಎಂಬ ವಿಷಯದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರವನ್ನು ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಆಯೋಜಿಸಲಾಯಿತು.


ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು, ದೇಶದಲ್ಲಿ ಸಮಗ್ರ ಅಭಿವೃದ್ಧಿಯ ಜೊತೆಗೆ ಸದೃಢವಾಗಿ ಪಕ್ಷ ಸಂಘಟನೆ ಮಾಡಿರುವ ಶ್ರೇಯಸ್ಸು ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಈ ದೇಶದಲ್ಲಿ ನೆಹರು ಅವರ ಬಳಿಕ ಸುದೀರ್ಘವಾಗಿ ಪ್ರಧಾನಮಂತ್ರಿಯಾಗಿದ್ದ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲುತ್ತದೆ‌. ಮೋದಿ ಅವರು 11 ವರ್ಷಗಳ ಕಾಲ ನಿರಂತರ ಆಡಳಿತ ನೀಡಿ ಅಭಿವೃದ್ಧಿಯ ಹರಿಕಾರಯಾಗಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಆಶ್ವಾಸನೆ, ಭರವಸೆಗಳನ್ನು ಈ ದೇಶದ ಜನತೆಗೆ ಬಿಜೆಪಿ ಸರಕಾರ ಕೊಟ್ಟಿದೆ. ಬಿಜೆಪಿ ಕೇವಲ ರಾಜಕಾರಣ ಮಾಡಲು ಅಧಿಕಾರ ನಡೆಸಲು ಇರುವ ಪಕ್ಷವಲ್ಲ. ಆಡಳಿತದ ಜೊತೆಗೆ ಪಕ್ಷ ಸಂಘಟನೆಯನ್ನು ಕೂಡ ಸದೃಢವಾಗಿ ಮಾಡುವ ಮೂಲಕ ದೇಶದಲ್ಲಿ ಮಾದರಿ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಒತ್ತಡ, ಟೀಕೆಗಳನ್ನು ಮೀರಿ ಉತ್ತಮವಾದ ಆಡಳಿತವನ್ನು ಮೋದಿಯವರು ನೀಡಿದ್ದಾರೆ ಎಂದರು.
ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮುಖಂಡರಾದ ರಾಜೇಶ್ ಕಾವೇರಿ, ರೇಷ್ಮಾ ಉದಯ್ ಶೆಟ್ಟಿ, ದಿನಕರ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!