ಉಡುಪಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ‘ಸಂಕಲ್ಪದಿಂದ ಸಾಧನೆವರೆಗೆ’ ಎಂಬ ವಿಷಯದಲ್ಲಿ ಜಿಲ್ಲಾಮಟ್ಟದ ಕಾರ್ಯಾಗಾರವನ್ನು ಉಡುಪಿ ಬಿಜೆಪಿ ಕಚೇರಿಯಲ್ಲಿ ಇಂದು ಆಯೋಜಿಸಲಾಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು, ದೇಶದಲ್ಲಿ ಸಮಗ್ರ ಅಭಿವೃದ್ಧಿಯ ಜೊತೆಗೆ ಸದೃಢವಾಗಿ ಪಕ್ಷ ಸಂಘಟನೆ ಮಾಡಿರುವ ಶ್ರೇಯಸ್ಸು ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ. ಈ ದೇಶದಲ್ಲಿ ನೆಹರು ಅವರ ಬಳಿಕ ಸುದೀರ್ಘವಾಗಿ ಪ್ರಧಾನಮಂತ್ರಿಯಾಗಿದ್ದ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲುತ್ತದೆ. ಮೋದಿ ಅವರು 11 ವರ್ಷಗಳ ಕಾಲ ನಿರಂತರ ಆಡಳಿತ ನೀಡಿ ಅಭಿವೃದ್ಧಿಯ ಹರಿಕಾರಯಾಗಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಆಶ್ವಾಸನೆ, ಭರವಸೆಗಳನ್ನು ಈ ದೇಶದ ಜನತೆಗೆ ಬಿಜೆಪಿ ಸರಕಾರ ಕೊಟ್ಟಿದೆ. ಬಿಜೆಪಿ ಕೇವಲ ರಾಜಕಾರಣ ಮಾಡಲು ಅಧಿಕಾರ ನಡೆಸಲು ಇರುವ ಪಕ್ಷವಲ್ಲ. ಆಡಳಿತದ ಜೊತೆಗೆ ಪಕ್ಷ ಸಂಘಟನೆಯನ್ನು ಕೂಡ ಸದೃಢವಾಗಿ ಮಾಡುವ ಮೂಲಕ ದೇಶದಲ್ಲಿ ಮಾದರಿ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಒತ್ತಡ, ಟೀಕೆಗಳನ್ನು ಮೀರಿ ಉತ್ತಮವಾದ ಆಡಳಿತವನ್ನು ಮೋದಿಯವರು ನೀಡಿದ್ದಾರೆ ಎಂದರು.
ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಮುಖಂಡರಾದ ರಾಜೇಶ್ ಕಾವೇರಿ, ರೇಷ್ಮಾ ಉದಯ್ ಶೆಟ್ಟಿ, ದಿನಕರ ಶೆಟ್ಟಿ, ಕುಯಿಲಾಡಿ ಸುರೇಶ್ ನಾಯಕ್, ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…