ಮಂಗಳೂರಿನ ನಂತೂರು ಜಂಕ್ಷನ್‌ನಿ0ದ ಸುರತ್ಕಲ್‌ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ. ಕೆಲವೆಡೆ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಗುಂಡಿಗಳು ಸಾವನ್ನು ಆಹ್ವಾನಿಸುತ್ತಿದೆ.

ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿದ್ದು, ದ್ವಿಚಕ್ರ ವಾಹನ ಸವಾರರು ಸಾವಿಗೀಡಾಗುತ್ತಿದ್ದಾರೆ. ಇದೀಗ ಪಣಂಬೂರು ಬಳಿ ರಸ್ತೆ ಅಪಘಾತದಲ್ಲಿ ಜನತಾಕಾಲನಿ ನಿವಾಸಿ ಅಶ್ರಫ್ ಸಾವನ್ನಪ್ಪಿದ್ದಾರೆ.

ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಯಲ್ಲಿ ಕೃತಕ ಸೃಷ್ಟಿ ಆಗಿರುವ ಗುಂಡಿಯಿ0ದಾಗಿ ಈ ಅಪಘಾತ ಸಂಭವಿಸಿದೆ ಎಂದು ಡಿವೈಎಫ್‌ಐ ಆರೋಪಿಸಿದೆ. ಹೆದ್ದಾರಿ ಇಲಾಖೆಯವರ ನಿರ್ಲಕ್ಷ್ಯತನ ಮತ್ತು ಜನಪ್ರತಿನಿಧಿಗಳ ಬೇಜವಾಬ್ದಾರಿತನವನ್ನ ಖಂಡಿಸಿ ಜೂನ್ 11ರಂದು ಪ್ರತಿಭಟನೆ ನಡೆಸುವ ಬಗ್ಗೆ ಹೋರಾಟ ಸಮಿತಿ ಸಂಚಾಲಕ ಬಿಕೆ ಇಮ್ತಿಯಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



