ಇಂದ್ರಾಳಿ ರೈಲು ನಿಲ್ದಾಣದ ಹೊರಾಂಗಣ ರಸ್ತೆಯ ಪಾದಚಾರಿ ರಸ್ತೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು, ಆಟೋ ಚಾಲಕರ ಸಹಕಾರದಿಂದ ರಕ್ಷಿಸಿದ್ದಾರೆ. ಬಳಿಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಯುವಕನನ್ನ ದಾಖಲಿಸಿದ್ದು, ಯುವಕ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಹೆಸರು, ವಿಳಾಸ ತಿಳಿದುಬಂದಿಲ್ಲ.

ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಯುವಕ ಸೊಂಟದ ಪಟ್ಟಿಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾಗ ಸಾರ್ವಜನಿಕರು ರಕ್ಷಣೆ ಮಾಡಿದ್ದಾರೆ. ಯುವಕನ ಬಾಯಿ ಮೂಗಿನಿಂದ ಸ್ವಲ್ಪ ಪ್ರಮಾಣದಲ್ಲಿ ರಕ್ತದ ಸೊರಿಕೆಯಾಗಿರುವುದು ಕಂಡುಬ0ದಿದೆ. ಯುವಕ ಮಾದಕದ್ರವ್ಯ ವ್ಯಸನ ಮಾಡಿರುವ ಶಂಕೆ ಕೂಡ ವ್ಯಕ್ತವಾಗಿದೆ.



