ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಇಂದಿನಿಂದ ಜೂನ್ 14ರವರೆಗೆ ಹವಾಮಾನ ಇಲಾಖೆ ಅಲರ್ಟ್ ಕೊಟ್ಟಿದೆ.
ಇಂದು ಉತ್ತರ ಕನ್ನಡ ಜಿಲ್ಲೆ ಹೊರತು ಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ 14 ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಬೆಳಗಾವಿ,ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಿದೆ. ಬೀದರ್,ಕಲ್ಬುರ್ಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…