ಇಂದು ಶಿವಮೊಗ್ಗದ ಬಸವ ಸಭಾ ಭವನದಲ್ಲಿ ಜರಗಿದ ಕುವೆಂಪು ವಿಶ್ವವಿದ್ಯಾಲಯದ 33ನೇ ವಾರ್ಷಿಕ ಘಟಿಕೋತ್ಸವದಲ್ಲಿ, ಶ್ರೀದೇವಿ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ.ಎ. ಸದಾನಂದ ಶೆಟ್ಟಿಯವರ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರಕ್ಕೆ ಸಲ್ಲಿಸಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರಧಾನ ಮಾಡಿ ಗೌರವಿಸಿದೆ.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕರಾದ ಶ್ರೀ .ಎ. ಸದಾನಂದ ಶೆಟ್ಟಿಯವರು ಉದ್ಯಮ, ಕ್ರೀಡೆ, ಸಮಾಜಸೇವೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಅಪರಿಮಿತ ಮತ್ತು ಜನ ಶ್ಲಾಘನೀಯವಾಗಿದೆ.




