ಆರೋಗ್ಯಧಾಮ ಯೋಗ ವಿದ್ಯಾ ಟ್ರಸ್ಟ್ (ರಿ.) ಮಂಗಳೂರು ತಪಸ್ವಿ ಸ್ಕೂಲ್ ಆಫ್ ಯೋಗ, ಮತ್ತು ಕೆನರಾ ಹೈಸ್ಕೂಲ್ ಅಸೋಸಿಯೇಶನ್ (ರಿ.), ಮಂಗಳೂರು ಇವರ ಸಹಯೋಗದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ-2025 ಕಾರ್ಯಕ್ರಮ ಜೂನ್ 15 ರಂದು ನಡೆಯಲಿದೆ.

ಈ ಬಗ್ಗೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಧ್ಯಕ್ಷರಾದ ಡಾ.ಸುರೇಶ್ ಕುಮಾರ್ ಶೆಟ್ಟಿ ಅವರು, ಉರ್ವದ ಕೆನರಾ ಪ್ರೌಢ ಶಾಲೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಿದೆ. ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯನ್ನು ಆಯೋಜಿಸುವ ಪ್ರಮುಖ ಉದ್ದೇಶ ಯೋಗ ಜ್ಞಾನದ ಪಸರಿಸುವಿಕೆಯಾಗಿದೆ. ಈ ಸ್ಪರ್ಧೆಯು ಪುರುಷ ಮತ್ತು ಮಹಿಳಾ ಸ್ಪರ್ಧಿಗಳಿಗೆ 14 ವಿಭಿನ್ನ ವಿಭಾಗಗಳನ್ನು ಒಳಗೊಂಡಿದ್ದು, 250ಕ್ಕಿಂತಲೂ ಹೆಚ್ಚು ಸ್ಪರ್ದಾಳುಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ವಿದ್ಯಾ ಕಾಮತ್, ಪ್ರಫುಲ್ಲ, ಪ್ರತ್ಯಕ್ಷ್ ಕುಮಾರ್ ಉಪಸ್ಥಿತರಿದ್ರು.



