ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಆಳಂದ ತಾಲ್ಲೂಕಿನ ಸಾವಳೇಶ್ವರ ಕ್ರಾಸ್ ಬಳಿ ನಡೆದಿದೆ.

32ರ ಹರೆಯದ ಸುಧಾಕರ್ ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಮಂಗಳವಾರ ತಡರಾತ್ರಿ ಸಹೋದರನ ಜೊತೆ ಬೈಕ್ ಮೇಲೆ ತೆರಳುವಾಗ ದುಷ್ಕರ್ಮಿಗಳು ದಾಳಿ ನಡೆಸಿ ಮಾರಾಕಾಸ್ತçಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ ಸುಧಾಕರನ ಸಹೋದರನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಳೆ ವೈಶಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.



