ಖ್ಯಾತ ಹಿನ್ನೆಲೆ ಗಾಯಕಿ ಮಂಗ್ಲಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮಂಗ್ಲಿ ಬರ್ತ್ ಡೇ ಪಾರ್ಟಿ ಮೇಲೆ ದಾಳಿ ಮಾಡಿರುವ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಸ್ನೇಹಿತರಿಗಾಗಿ ಮಂಗ್ಲಿ ಪಾರ್ಟಿ ಪ್ಲಾನ್ ಮಾಡಿದ್ದು, ಡ್ರಗ್ಸ್ ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಗಾಯಕಿ ಮಂಗ್ಲಿ ಅವರು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದ ತ್ರಿಪುರಾ ರೆಸಾರ್ಟ್ನಲ್ಲಿ ನಿನ್ನೆ ತಮ್ಮ ಬರ್ತ್ ಡೇ ಪಾರ್ಟಿ ಆಯೋಜನೆ ಮಾಡಿದ್ದರು.
ಪೊಲೀಸರು ಈ ಪಾರ್ಟಿ ಮೇಲೆ ರೇಡ್ ಮಾಡಿದ್ದು, ಕಾರ್ಯಕ್ರಮದ ಆಯೋಜಕರಿಂದ ಅಪಾರ ಪ್ರಮಾಣದ ವಿದೇಶಿ ಮದ್ಯ, ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಂಗ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಆಪ್ತ ಸ್ನೇಹಿತರು, ಕುಟುಂಬಸ್ಥರು ಸೇರಿ 48 ಮಂದಿಯಷ್ಟೇ ಭಾಗಿಯಾಗಿದ್ದರು. 48 ಮಂದಿಯ ಡ್ರಗ್ಸ್ ಪರೀಕ್ಷೆಯಲ್ಲಿ 9 ಜನಕ್ಕೆ ಡ್ರಗ್ಸ್ ಪಾಸಿಟಿವ್ ಬಂದಿದೆ. ಎನ್‌ಡಿಪಿಎಸ್ ಆ್ಯಕ್ಟ್ ಹಾಗೂ ಶಬ್ದ ಮಾಲಿನ್ಯ ಕಾಯಿದೆಯಡಿ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಹುಭಾಷಾ ಗಾಯಕಿ ಮಂಗ್ಲಿ ಅವರು ಪೊಲೀಸರ ಅನುಮತಿ ಪಡೆಯದೆ ಪಾರ್ಟಿ ಆಯೋಜನೆ ಮಾಡಿದ್ದಾರೆ.
ಪಾರ್ಟಿ ಮೇಲೆ ಏಕಾಏಕಿ ದಾಳಿ ಮಾಡಿರುವ ಪೊಲೀಸರು, ಅನುಮತಿಯಿಲ್ಲದೆ ಬಳಸಲಾಗಿದ್ದ ಡಿಜೆ ಸಿಸ್ಟಂ, ವಿದೇಶಿ ಮದ್ಯ ಹಾಗೂ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಗಾಂಜಾ ಸೇವನೆ ಮಾಡಿದ್ದ 9 ಜನರನ್ನು ಬಂಧಿಸಿ ಪರೀಕ್ಷೆ ನಡೆಸಿದ್ದಾರೆ. ಗಾಯಕಿ ಮಂಗ್ಲಿ ಹಾಗೂ ತ್ರಿಪುರಾ ರೆಸಾರ್ಟ್ ಜನರಲ್ ಮ್ಯಾನೇಜರ್ ಶಿವರಾಮ ಕೃಷ್ಣ ವಿರುದ್ಧ ಕೇಸ್ ದಾಖಲಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…