ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್‌ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು, ಪಾದಚಾರಿಗಳ ಬಲಿಗಾಗಿ ಆಹ್ವಾನಿಸುವಂತಿದೆ.
ದಿನವೂ ಕಿಕ್ಕಿರಿದು ಜನರು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ. ಮಾತ್ರವಲ್ಲದೆ ಈ ಮೊದಲೇ ಅಲ್ಲಿ ಇದ್ದ ಡ್ರೈನೇಜ್ ಗುಂಡಿಯು ಬಾಯಿ ತೆರೆದಿದ್ದು ಅಪಾಯಕ್ಕೆ ದಾರಿಮಾಡಿಕೊಡುತ್ತಿದೆ. ಕೆಲ ದಿನಗಳ ಹಿಂದೆ ಈ ಗುಂಡಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಿದ್ದ ಘಟನೆ ಕೂಡ ನಡೆದಿದೆ. ಅಪಾಯ ಕಣ್ಣೆದುರಿಗೇ ಇದ್ರೂ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಅದಕ್ಕೆ ತೇಪೆ ಹಚ್ಚುವ ಕೆಲಸವೂ ಮಾಡದೇ, ಗುಂಡಿಯ ಬದಿಗೆ ಯಾವುದೇ ಕನಿಷ್ಠ ಅಪಾಯವನ್ನು ತಡೆಯುವ ಸೂಚನಾ ಫಲಕವನ್ನೂ ಇಟ್ಟಿಲ್ಲ. ರಸ್ತೆಯಲ್ಲಿ ವಾಹನ ಸಂಚಾರ ದಟ್ಟವಾಗಿದ್ದು ಆ ಭಾಗವಾಗಿ ನಡೆದು ಹೋಗುವುದು ಸವಾಲಾಗಿದೆ.
ಮುಂಗಾರು ಚುರುಕಾಗಿದ್ದು, ಹಾನಿಯಾದ ರಸ್ತೆಯು ಬಾಯ್ತೆರೆದು ನಿಂತಿದೆ. ಮುಂದಿನ ದಿನಗಳಲ್ಲಿ ಈ ಗುಂಡಿಯಲ್ಲಿ ಬಿದ್ದು ಕೈ, ಕಾಲು ಮುರಿಯುವ ಸಾಧ್ಯತೆಯ ಜೊತೆಗೆ ದೊಡ್ದ ಅಪಾಯದ ಮುನ್ಸೂಚನೆಯಂತೆ ಗೋಚರಿಸುತ್ತಿದೆ. ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…