ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಬಿಜೆಪಿ ನಿಯೋಗ ಪೊಲೀಸರ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡ್ತಾ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇವರು ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಪಕ್ಷದ ನಿಯೋಗವು ಇಲ್ಲಿನ ಅಧಿಕಾರಿಗಳನ್ನು, ಧಾರ್ಮಿಕ ಮುಖಂಡರನ್ನು, ಕಾರ್ಮಿಕ ವಲಯ ಸದಸ್ಯರನ್ನು, ಜನ ಸಾಮಾನ್ಯರನ್ನು ಬೇಟಿಯಾಗಿ ಈ ಜಿಲ್ಲೆಯಲ್ಲಿ ಶಾಶ್ವತವಾಗಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವುದರ ಬಗ್ಗೆ ಚರ್ಚೆ ನಡೆಸಿದ್ರು. ಇನ್ನೆರಡು ದಿನಗಳಲ್ಲಿ ನಿಯೋಗದ ವರದಿಯು ಜಾರಿಗೆ ಬರಲಿದೆ. ಆದ್ರೆ ಎರಡು ದಿನಗಳ ಹಿಂದೆ ಬಂದ ಬಿಜೆಪಿ ಪಕ್ಷ ಪೊಲೀಸರ ಕ್ರಮಗಳನ್ನು ಪ್ರಶ್ನೆ ಮಾಡ್ತಾ ಇದ್ದಾರೆ. ಪೊಲೀಸರ ವಿರುದ್ದ ಲಘುವಾದ ಹೇಳಿಕೆಗಳನ್ನು ನೀಡ್ತಾ ಇದ್ದಾರೆ. ಅವರಿಗೆ ಈ ಜಿಲ್ಲೆಯ ಅಭಿವೃದ್ಧಿ ಮುಖ್ಯವಲ್ಲ. ಬದಲಾಗಿ ಅಶಾಂತಿ ನಿರ್ಮಾಣ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ನವೀನ್ ಡಿ ಸೌಝ, ಪ್ರಕಾಶ್ ಸಾಲಿಯಾನ್, ನಿರಾಜ್ ಚಂದ್ರಪಾಲ್, ಕೇಶವ ಮಾರೋಳಿ, ಲಾರೆನ್ಸ್ ಡಿ ಸೌಝ, ಸುಹಾನ್ ಆಳ್ವಾ, ಶುಭೋದಯ ಆಳ್ವಾ ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…