ಪಾಣೆಮಂಗಳೂರು ಸೇತುವೆ ಮೇಲೆ ಸಂಚಾರ ನಿಷೇಧ ಹೇರಿ ಹಾಕಲಾದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ಸಾವಿರಾರು ರೂಪಾಯಿ ನಷ್ಟ ಉಂಟು ಮಾಡಿದ ವಾಹನ ಚಾಲಕನ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ನಝೀರ್ ಅಹಮದ್ ಅವರು ದೂರು ನೀಡಿದ್ದಾರೆ.
ಬಂಟ್ವಾಳ ತಾಲೂಕು ಬಿ ಮೂಡಾ ಗ್ರಾಮದ ಹಳೇ ರಾಷ್ಟ್ರೀಯ ಹೆದ್ದಾರಿ ಎನ್. ಹೆಚ್. 48 ರ ಸೇತುವೆಯನ್ನು 2004-05 ರಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯವರು ನಿರ್ವಹಣೆ ಮತ್ತು ದುರಸ್ಥಿ ಬಗ್ಗೆ ಪುರಸಭೆಗೆ ಹಸ್ತಾಂತರಿಸಿದ್ರು. ಇದು ಸ್ವಾತಂತ್ರ‍್ಯ ಪೂರ್ವ ಕಾಲದ ಸೇತುವೆಯಾಗಿದ್ದು, ಈ ಹಳೆಯ ಸೇತುವೆಯಲ್ಲಿ ಪ್ರಸ್ತುತ ಸರಕಾರ ಘನ ವಾಹನ ಸಂಚಾರವನ್ನು ನಿರ್ಬಂಧಿಸಿ ರಸ್ತೆಯ 2 ಬದಿಗಳಲ್ಲಿ ಕಬ್ಬಿಣದ ತಡೆಗಳನ್ನು ಹಾಕಿ ಘನ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ರಸ್ತೆಯಲ್ಲಿ ಸಾವರ್ಜನಿಕ ಲಘು ವಾಹನಗಳು ಮಾತ್ರ ಸಂಚರಿಸುತ್ತಿರುವುದಾಗಿದೆ.
ಜೂನ್. 9 ರಂದು ಕೆಎ.19.ಎಇ.5621 ನೇ ವಾಹನವನ್ನು ಅದರ ಚಾಲಕರು ಸೇತುವೆಯ ಧಾರಣ ಸಾಮರ್ಥ್ಯ ದ ಬಗ್ಗೆ ಆಳವಡಿಸಿದ ಕಬ್ಬಿಣದ ತಡೆಯನ್ನು ಮುರಿದು ಹಾಕಿ ಸರಕಾರಕ್ಕೆ ಸುಮಾರು ರೂ 80,000 ದಷ್ಟು ನಷ್ಟವನ್ನು ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸಾವರ್ಜನಿಕ ಸೇತುವೆಯ ಉಪಯೋಗಕ್ಕೆ ಆಳವಡಿಸಿದ ಧಾರಣ ಸಾಮರ್ಥ್ಯ ದ ಬಗ್ಗೆ ಆಳವಡಿಸಿದ ಕಬ್ಬಿಣದ ತಡೆಯನ್ನು ಮುರಿದು ಸರಕಾರಕ್ಕೆ ನಷ್ಟ ಉಂಟು ಮಾಡಿದ ವಾಹನ ಮತ್ತು ಚಾಲಕರ ಮೇಲೆ ಕಾನೂನು ಕ್ರಮಕೈಗೊಳ್ಳವಂತೆ ಮುಖ್ಯಾಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…