ಜನ ಮನದ ನಾಡಿ ಮಿಡಿತ

Advertisement

ಕೊಣಾಜೆ: ಗುಡ್ಡ ಕುಸಿದು ದುರಂತ ನಡೆದ ಮನೆಗೆ ಯು.ಟಿ.ಖಾದರ್ ಭೇಟಿ

ದೇರಳಕಟ್ಟೆ ಬೆಳ್ಮ ಗ್ರಾಮದ ಕಾನೆಕೆರೆ ಎಂಬಲ್ಲಿ ಮನೆಯ ಮೇಲೆ ಗುಡ್ಡ ಕುಸಿದು ಬಾಲಕಿಯೊಬ್ಬಳು ಮೃತಪಟ್ಟ ಘಟನೆಗೆ ಸಂಬAಧಿಸಿದAತೆ ದುರಂತ ನಡೆದ ಮನೆಗೆ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ. ಈ ಸಂದರ್ಭದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಕಾನಕೆರೆಯ ಈ ಪ್ರದೇಶದಲ್ಲಿ ತುಂಬಾ ಗಂಭೀರ ಪರಿಸ್ಥಿತಿ ಇದೆ.

ಮಳೆಗಾಲ ಮುಗಿಯುವ ತನಕ ತಾತ್ಕಾಲಿಕವಾಗಿ ಇನ್ನಷ್ಟು ಗುಡ್ಡ ಕುಸಿಯದಂತೆ ಸಂರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಗುಡ್ಡ ಕುಸಿದ ಜಾಗದಲ್ಲೆ ಮನೆ ನಿರ್ಮಿಸಲು ಕಾನೂನಿನ ಅವಕಾಶವಿಲ್ಲ. ಪರ್ಯಾಯವಾಗಿ ಪ್ರಕೃತಿ ವಿಕೋಪದಡಿ ಅವಕಾಶಗಳ ಬಗೆಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅಲ್ಲದೆ ಮಾನವೀಯತೆ ದೃಷ್ಟಿಯಿಂದ ಇನ್ನಷ್ಟು ಅನುಕೂಲತೆ ಮತ್ತು ಅನುದಾನ ಒದಗಿಸಿಕೊಡುವಂತೆ ಮತ್ತೊಮ್ಮೆ ಕಂದಾಯ ಸಚಿವರು ಹಾಗೂ ಮುಖ್ಯಮಂತ್ರಿಯವರೊAದಿಗೆ ಚರ್ಚಿಸುತ್ತೇನೆ ಎಂದಿದ್ದಾರೆ. ಬಳಿಕ ಮಂಜನಾಡಿ ಗ್ರಾಮದ ಮೊಂಟೆಪದವು ಕೊಪ್ಪಳ ಪ್ರದೇಶದಲ್ಲಿ ಗುಡ್ಡದೊಂದಿಗೆ ಮನೆ ಕುಸಿದು ನಡೆದ ದುರಂತದಲ್ಲಿ ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿರುವ ಅಶ್ವಿನಿ ಹಾಗೂ ಕಾಂತಪ್ಪ ಪೂಜಾರಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!