ಜುಗಾರಿ ಅಡ್ಡೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಳ್ಳದೆ ಹಣದ ಬೇಡಿಕೆ ಒಡ್ಡಿದ ಆರೋಪದಲ್ಲಿ ವಿಟ್ಲ ಪೊಲೀಸ್ ಠಾಣಾ ಎಸ್.ಐ. ಕೌಶಿಕ್ ಬಿ.ಸಿ.ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.
ಮೇ.8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧಾರದಲ್ಲಿ ಠಾಣಾ ಎಸ್.ಐ. ಕೌಶಿಕ್ ಬಿ. ಕೌಶಿಕ್ ಬಿ ಸಿ,ರವರು ದಾಳಿ ನಡೆಸಿದ್ರು. ಈ ವೇಳೆ ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗಿದ್ರು, ಮಾತ್ರವಲ್ಲದೆ ಸ್ಥಳದಲ್ಲಿ ಮೋಟಾರು ಸೈಕಲ್ ಕಂಡು ಬಂದಿತ್ತು. ಆರೋಪಿಗಳ ಸಹಿತ ಸೊತ್ತನ್ನು ವಶಕ್ಕೆ ಪಡೆದು ಕೊಳ್ಳಬೇಕಿದ್ದ ಎಸ್.ಐ. ಕೌಶಿಕ್‌ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಕೈಗೊಳ್ಳದೇ ಬೈಕ್ ಮಾಲಕನಿಗೆ ಕರೆಮಾಡಿ ಠಾಣೆಗೆ ಬರಮಾಡಿಕೊಂಡಿದ್ದಾರೆ. ಬಳಿಕ ಬೈಕ್ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಎಸ್.ಐ. ಕೌಶಿಕ್ ರವರ ಮೇಲೆ ಮೇ.12ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…