ಅಹ್ಮದಾಬಾದ್‌ನ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು ಈ ವಿಮಾನದಲ್ಲಿ ಸುಮಾರು 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ಆದರೆ ಈ ದುರಂತದಲ್ಲಿ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿರುವ ಮಾಹಿತಿ ಲಭ್ಯ ಆಗಿದೆ.
ಇನ್ನು, ಟಾಟಾ ಗ್ರೂಪ್, ಏರ್ ಇಂಡಿಯಾ ವಿಮಾನ ಅಪಘಾತಕ್ಕೆ ದುಃಖ ವ್ಯಕ್ತಪಡಿಸಿದ್ದು, ಇದರಲ್ಲಿ ಜೀವ ಕಳೆದುಕೊಂಡ ಎಲ್ಲಾ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ಘೋಷಣೆ ಮಾಡಿದೆ. ಗ್ರೂಪ್ ಅಧ್ಯಕ್ಷ ಎನ್.ಚಂದ್ರಶೇಖರನ್ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಏರ್ ಇಂಡಿಯಾ ಫ್ಲೈಟ್-171 ದುರಂತದಿAದ ತೀವ್ರ ನೋವಾಗಿದೆ. ತಮ್ಮ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ದುಃಖಿತ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇವೆ.
ಇನ್ನು ಟಾಟಾ ಗ್ರೂಪ್ ಸಂತ್ರಸ್ತ ಪ್ರತಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ಅಗತ್ಯ ಆರೈಕೆ ಮತ್ತು ಸಹಾಯವನ್ನು ಖಚಿತಪಡಿಸುವುದರ ಜೊತೆಗೆ ವೈದ್ಯಕೀಯ ವೆಚ್ಚವನ್ನೂ ಭರಿಸುವುದಾಗಿ ಟಾಟಾ ಗ್ರೂಪ್ ತಿಳಿಸಿದೆ. ಜೊತೆಗೆ ಬಿಜೆ ಮೆಡಿಕಲ್‌ನ ಹಾಸ್ಟೆಲ್ ನಿರ್ಮಾಣಕ್ಕೂ ಸಹಾಯ ನೀಡಲಾಗುವುದು ಎಂದು ತಿಳಿಸಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…