ಜನ ಮನದ ನಾಡಿ ಮಿಡಿತ

Advertisement

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ!!!

ಅಹ್ಮದಾಬಾದ್‌ನ ದುರಂತ ಸ್ಥಳಕ್ಕೆ ಪ್ರಧಾನಿ ಮಂತ್ರಿ ಭೇಟಿ ನೀಡಿ ಘಟನಾ ಸ್ಥಳವನ್ನ ಪರಿಶೀಲನೆ ನಡೆಸಿದ್ದಾರೆ. ವಿಮಾನದ ಇಂಧನವು ದುರ್ಘಟನಾ ಸ್ಥಳದಲ್ಲಿ ಸೋರಿಕೆಯಾಗಿದ್ದು ಇದ್ರಿಂದ ಯಾವುದಾದ್ರು ದುರ್ಘಟನೆ ಸಂಭವಿಸೋ ಅನುಮಾನ ಕೂಡ ವ್ಯಕ್ತವಾಗ್ತಾ ಇದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕಾರಣಗಳಿಂದಾಗಿ ಭದ್ರತಾ ದೃಷ್ಟಿಯಿಂದ ಹೆಚ್ಚಿನ ಹೊತ್ತು ದುರಂತ ಸ್ಥಳದಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ರು. ಹೀಗಾಗಿ ಪ್ರಧಾನಿ ಮೋದಿ 10 ನಿಮಿಷಗಳ ಕಾಲ ಘಟನಾ ಸ್ಥಳವನ್ನು ಪರಿಶೀಲಿಸಿ ಹಿಂತಿರುಗಿದರು.

ಘಟನಾ ಸ್ಥಳ ಪರಿಶೀಲನೆ ನಡೆಸಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಿವಿಲ್ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಹ್ಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತದಲ್ಲಿ ಪ್ರಯಾಣಿಕರು, ಸಿಬ್ಬಂದಿ, ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಒಟ್ಟು 265 ಜನರು ಜೀವ ಕಳೆದುಕೊಂಡಿದ್ದಾರೆ. ಆದರೆ ವಿಮಾನದಲ್ಲಿದ್ದ ಓರ್ವ ವ್ಯಕ್ತಿ, ಹಾಸ್ಟೆಲ್‌ನಲ್ಲಿದ್ದ ಉಳಿದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವ್ರಿಗೆಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಹಾಗೆ ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರಿದ್ದು ಅವರಲ್ಲಿ ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನುಳಿದ 241 ಪ್ರಯಾಣಿಕರು ಅಲ್ಲೇ ಜೀವ ಕಳೆದುಕೊಂಡಿದ್ದಾರೆ. ಬೋಯಿಂಗ್ ವಿಮಾನ ಹಾಸ್ಟೆಲ್ ಮೇಲೆ ಬಿದ್ದಿದ್ದರಿಂದ 24 ಮೆಡಿಕಲ್ ವಿದ್ಯಾರ್ಥಿಗಳು ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!