ಅಹ್ಮದಾಬಾದ್‌ನ ದುರಂತ ಸ್ಥಳಕ್ಕೆ ಪ್ರಧಾನಿ ಮಂತ್ರಿ ಭೇಟಿ ನೀಡಿ ಘಟನಾ ಸ್ಥಳವನ್ನ ಪರಿಶೀಲನೆ ನಡೆಸಿದ್ದಾರೆ. ವಿಮಾನದ ಇಂಧನವು ದುರ್ಘಟನಾ ಸ್ಥಳದಲ್ಲಿ ಸೋರಿಕೆಯಾಗಿದ್ದು ಇದ್ರಿಂದ ಯಾವುದಾದ್ರು ದುರ್ಘಟನೆ ಸಂಭವಿಸೋ ಅನುಮಾನ ಕೂಡ ವ್ಯಕ್ತವಾಗ್ತಾ ಇದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕಾರಣಗಳಿಂದಾಗಿ ಭದ್ರತಾ ದೃಷ್ಟಿಯಿಂದ ಹೆಚ್ಚಿನ ಹೊತ್ತು ದುರಂತ ಸ್ಥಳದಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ರು. ಹೀಗಾಗಿ ಪ್ರಧಾನಿ ಮೋದಿ 10 ನಿಮಿಷಗಳ ಕಾಲ ಘಟನಾ ಸ್ಥಳವನ್ನು ಪರಿಶೀಲಿಸಿ ಹಿಂತಿರುಗಿದರು.
ಘಟನಾ ಸ್ಥಳ ಪರಿಶೀಲನೆ ನಡೆಸಿದ್ದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸಿವಿಲ್ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಹ್ಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ದುರಂತದಲ್ಲಿ ಪ್ರಯಾಣಿಕರು, ಸಿಬ್ಬಂದಿ, ಹಾಗೂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಒಟ್ಟು 265 ಜನರು ಜೀವ ಕಳೆದುಕೊಂಡಿದ್ದಾರೆ. ಆದರೆ ವಿಮಾನದಲ್ಲಿದ್ದ ಓರ್ವ ವ್ಯಕ್ತಿ, ಹಾಸ್ಟೆಲ್‌ನಲ್ಲಿದ್ದ ಉಳಿದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವ್ರಿಗೆಲ್ಲಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಹಾಗೆ ವಿಮಾನದಲ್ಲಿ ಒಟ್ಟು 242 ಪ್ರಯಾಣಿಕರಿದ್ದು ಅವರಲ್ಲಿ ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಇನ್ನುಳಿದ 241 ಪ್ರಯಾಣಿಕರು ಅಲ್ಲೇ ಜೀವ ಕಳೆದುಕೊಂಡಿದ್ದಾರೆ. ಬೋಯಿಂಗ್ ವಿಮಾನ ಹಾಸ್ಟೆಲ್ ಮೇಲೆ ಬಿದ್ದಿದ್ದರಿಂದ 24 ಮೆಡಿಕಲ್ ವಿದ್ಯಾರ್ಥಿಗಳು ಕೂಡ ಪ್ರಾಣ ಕಳೆದುಕೊಂಡಿದ್ದಾರೆ.
ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…