ಕರಾವಳಿ

ದುಬೈ: ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ಸ್ವೀಕರಿಸಲಿರುವ ಕಾಸರಗೋಡು ಶ್ರೀಯುತ ಸುಬ್ರಾಯ ಹೊಳ್ಳರು

ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯು ಎ ಇ ವರ್ಷಂಪ್ರತಿ, ದುಬಾಯಿ ಅಥವ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ಪ್ರಶಸ್ತಿ ನೀಡುತ್ತಾ ಬಂದಿರುವಂತೆ, 2024-2025 ನೇ ಸಾಲಿನ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ಯಕ್ಷಗಾನದ ಪ್ರಾತಿನಿಧಿಕ ಕಲಾವಿದ, ಕಾಸರಗೋಡು ಶ್ರೀಯುತ ಸುಬ್ರಾಯ ಹೊಳ್ಳರಿಗೆ ನೀಡಲಾಗುವುದೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
     ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇಯ ದಶಮಾನೋತ್ಸವ ಕಾರ್ಯಕ್ರಮದಂಗವಾಗಿ ಜೂ.29 ರಂದು ಯಕ್ಷಧ್ರುವ ಪಟ್ಲ ಪೌಂಡೇಶನ್ ದುಬೈ (ಯುಎಇ) ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿರುವ ದುಬಾಯಿ ಯಕ್ಷೋತ್ಸವ 2025 ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ, ಅಸಾಧಾರಣ ಕಲಾಗುಣ ಸೌಂದರ್ಯ ಮಾಧುರ್ಯಗಳಿಂದ ಜನ ಸಾಮಾನ್ಯರೂ ಅರ್ಥವಿಸಿಕೊಳ್ಳುವ ಮಾಧ್ಯಮವಾದ ಯಕ್ಷಗಾನವನ್ನು ಒಪ್ಪಿ ಅಪ್ಪಿಕೊಂಡು ನಿರಂತರ 42 ವರ್ಷಗಳ ಕಾಲ ಯಕ್ಷಗಾನದ ಸೇವೆಯನ್ನು ಮಾಡುತ್ತ ಬಂದಿರುವ ಕೆ.ಎನ್.ಸುಬ್ರಾಯ ಹೊಳ್ಳ ಕಾಸರಗೋಡುರವರಿಗೆ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇವರ ವಾರ್ಷಿಕ ಪ್ರಶಸ್ತಿ “ಯಕ್ಷ ಶ್ರೀ ರಕ್ಷ ಗೌರವ ಪ್ರಶಸ್ತಿ-2025″ಯನ್ನು ನೀಡಿ ಗೌರವಿಸಲಾಗುವುದು.
  ಯಕ್ಷಗಾನದ ಪಿತಾಮಹ ಪಾರ್ತಿಸುಬ್ಬ ಹುಟ್ಟಿದ  ಜಿಲ್ಲೆಯಲ್ಲಿ ಕೆ.ಎಸ್ ನಾರಾಯಣ ಹೊಳ್ಳ ಮತ್ತು ಪದ್ಮಾವತಿ ಅಮ್ಮನವರ ಮಗನಾಗಿ 17-12-1965 ರಲ್ಲಿ, ಭುವಿಯ ಬೆಳಕನು ಕಂಡವರು, ಕೆ.ಎನ್ ಸುಬ್ರಾಯ ಹೊಳ್ಳರು. ಕಾಸರಗೋಡಿನಲ್ಲೇ 8ನೇ ತರಗತಿ ತನಕ ವ್ಯಾಸಂಗ ಮಾಡಿದ ಶ್ರೀಯುತರಿಗೆ, ಮುಂದೆ ಯಕ್ಷಗಾನವೇ ಬದುಕಿಗೆ ಬೆಳಕಾಯಿತು. ಗುರುಗಳಾದ ಕೂಡ್ಲು ಆನಂದರು ಹಾಗೂ ಕೂಡ್ಲು ನಾರಯಣ ಬಲ್ಯಾಯರ ಶಿಷ್ಯತ್ವವನ್ನು ಸ್ವೀಕರಿಸಿ ಯಕ್ಷಗಾನದ ಹೆಜ್ಜೆಗಾರಿಕೆ ಅಭ್ಯಾಸ ಮಾಡಿದ ಶ್ರೀಯುತರು,  ಬಳಿಕ 1984 ನೇ ಇಸವಿಯಲ್ಲಿ ಕಟೀಲು ಮೇಳಕ್ಕೆ ಪಾದಾರ್ಪಣೆ ಮಾಡಿದರು. ನಂತರ ಪುತ್ತೂರು, ಕದ್ರಿ, ಕರ್ನಾಟಕ, ಮಧೂರು ಬಪ್ಪನಾಡು ಮರಳಿ ಕಟೀಲು, ಹೊಸನಗರ , ಎಡನೀರು, ಹನುಮಗಿರಿ, ಧರ್ಮಸ್ಥಳ ಇಂತಹ ತೆಂಕುತಿಟ್ಟಿನ ಮೇಳಗಳಲ್ಲಿ ತಿರುಗಾಟ ಮಾಡಿದ ಹೊಳ್ಳರು ಸದ್ಯಕ್ಕೆ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ  ಪಾವಂಜೆ ಮೇಳದಲ್ಲಿ ತಿರುಗಾಟ ಮಾಡುತಿದ್ದಾರೆ. ಪ್ರಧಾನ ಕಿರೀಟ ವೇಷಗಳ ಜೊತೆ ನಾಟಕೀಯವೇಷಗಳಲ್ಲಿ ಹೆಚ್ಚಿನ ಸಿದ್ಧಿ. ಅಗತ್ಯಕ್ಕೆ ಸ್ತ್ರೀಷ -ಬಣ್ಣದ ವೇಷಗಳನ್ನೂ ಮಾಡಿದವರು. ಶ್ರೀಮತಿ ಶಾರದರನ್ನು ವರಿಸಿದ ಹೊಳ್ಳರು ಹರಿನಾರಾಯಣ ಮತ್ತು ಪದ್ಮಶ್ರೀ ಎಂಬ ಇಬ್ಬರು ಮಕ್ಕಳೊಂದಿಗೆ ಬಂಟ್ವಾಳ  ಗ್ರಾಮದಲ್ಲಿ ಸಂತೃಪ್ತ ಜೀವನ ಸಾಗಿಸುತಿದ್ದಾರೆ.
     2002 ಮಾರ್ಚ್ 17ರಂದು ಕಾಸರಗೋಡು ಪುರಸಭೆಯ ನೇತೃತ್ವದಲ್ಲಿ ಶೇಣಿಯವರ ಅಧ್ಯಕ್ಷತೆಯಲ್ಲಿ ನಡೆದ ಯಕ್ಷಗಾನ ಸಮ್ಮೇಳನದಲ್ಲಿ “ಗೌರವ ಸನ್ಮಾನ”, 2007 ಸಪ್ಟೆಂಬರ್ 3ರಂದು ಮೈಸೂರಿನಲ್ಲಿ ನಡೆದ ಚೆಂಡೆ ಮೇಳ ಕಲಾ ಸಂಘದ ಕಾರ್ಯಕ್ರಮದಲ್ಲಿ ಪಲಿಮಾರು ಶ್ರೀಗಳಿಂದ “ಯಕ್ಷ ಸಿರಿ” ಬಿರುದು ಪ್ರದಾನ, 2008 ಜುಲೈ ನಾಲ್ಕರಂದು ಬಹ್ರೈನ್ ಕನ್ನಡ ಸಂಘದಿAದ “ಸನ್ಮಾನ”, 2010 ಸಪ್ಟೆಂಬರ್ ಐದರಂದು ಪದ್ಮನಾಭ ಕಟೀಲು ದುಬೈ ಸಂಯೋಜನೆಯ ಕಟೀಲು ದಿ.ಗೋಪಾಲಕೃಷ್ಣ ಅಸ್ರಣ್ಣ ಸಂಸ್ಕರಣಾ ಕಾರ್ಯಕ್ರಮ ಮುಂಬಯಿಯಲ್ಲಿ “ಅಸ್ರಣ್ಣ ಪ್ರಶಸ್ತಿ” ಪ್ರದಾನ, 2012 ಅಕ್ಟೋಬರ್ 16ರಂದು ಹೈದರಾಬಾದ್ ನಲ್ಲಕುಂಟದ ಶಂಕರಭವನದಲ್ಲಿ “ಯಕ್ಷ ಕಿರೀಟಿ” ಪ್ರಶಸ್ತಿ ಪ್ರದಾನ, 2012 ಅಕ್ಟೋಬರ್ 24ರಂದು ಕಟೀಲು ಮೇಳದ ಆಯ್ದ ಕಲಾವಿದರಿಂದ ಸಿಂಗಪೂರದಲ್ಲಿ ಯಕ್ಷಗಾನದಲ್ಲಿ ಬಾಗವಹಿಸುವಿಕೆ, 2013 ಜನವರಿ 14 ರಂದು ಕಾಸರಗೋಡು ಶ್ರೀ ರಾದಕೃಷ್ಣ ಅಡಿಗಳ ನೂತನ ಗೃಹ ಪ್ರವೇಶದ ಕಾರ್ಯಕ್ರಮದಲ್ಲಿ “ರಜತ ಕಿರೀಟ” ಸಮರ್ಪಣೆ, 2016 ಮೇ ಏಳರಂದು ಅಮೃತಧಾರ ಶ್ರೀ ಶ್ರೀ ಕೇಶವಾನಂದ ಭಾರತೀ ಆರೋಗ್ಯ ಸಂಸ್ಥೆ ಎರುಗಲ್ಲು ಅಡ್ಯನಡ್ಕದಲ್ಲಿ “ಯಕ್ಷ ಕಲಾ ರತ್ನ” ಬಿರುದು ಪ್ರದಾನ, 2016 ಸಪ್ಟೆಂಬರ್ 3ರಂದು ಮಂಗಳೂರಿನ ಡಾನ್ ಬಾಸ್ಕೊ ಹಾಲ್ ನಲ್ಲಿ ಲಯನ್ಸ್ ಕ್ಲಬ್ – ಯಕ್ಷ ವೈಭವ ಕಾರ್ಯಕ್ರಮದಲ್ಲಿ “ಸನ್ಮಾನ”, 2016 ಅಕ್ಟೋಬರ್ 15ರಂದು ಯಕ್ಷ ಅಭಿಮಾನಿ ಸುರತ್ಕಲ್ ವತಿಯಿಂದ ಸನ್ಮಾನ-ನಿಧಿ ಸಮರ್ಪಣೆ”, 2017 ಅಕ್ಟೋಬರ್ 12ರಂದು ರೋಟರಿ ಕ್ಲಬ್ ಉಡುಪಿ ಉದ್ಯಾವರ ಇದರ ಆಶ್ರಯದಲ್ಲಿ ತ್ರಿಕ್ಕಣ್ಣೇಶ್ವರೀ ಪತ್ರಿಕೆ ಕೊಡಮಾಡುವ “ತ್ರಿಕ್ಕಣ್ಣೇಶ್ವರೀ ಪ್ರಶಸ್ತಿ” ಪ್ರದಾನ, 2020 ಅಕ್ಟೋಬರ್ 17ರಂದು ಪೊಳಲಿ ಯಕ್ಷೋತ್ಸವ ರಜತ ಸಂಭ್ರಮದಲ್ಲಿ “ಸನ್ಮಾನ”, 2025 ಫೆಬ್ರವರಿ 16ರಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ 2024 ನೇ ಸಾಲಿನ “ಗೌರವ ಪ್ರಶಸ್ತಿ” ಲಭಿಸಿದೆ. ಪ್ರಶಸ್ತಿಗೆ ಆಯ್ಕೆಯಾದ ಶ್ರೀಯುತ ಸುಬ್ರಾಯ ಹೊಳ್ಳರಿಗೆ ಯಕ್ಷಗಾನ ಅಭ್ಯಾಸ ಕೇಂದ್ರ ಯು ಎ ಇ ಮತ್ತು ಸಮಸ್ತ ಯು ಎ ಇ ಯ ಯಕ್ಷಗಾನ ಅಭಿಮಾನಿಗಳ ಪರವಾಗಿ ಶುಭಾಶಯಗಳು.
                                                                                                                                                                                                                                 ವಿಜಯಕುಮಾರ್ ಶೆಟ್ಟಿ ಗಾಣದಮೂಲೆ (ದುಬೈ)
ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…

7 hours ago

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…

7 hours ago

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…

8 hours ago

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…

6 days ago

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…

6 days ago

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…

6 days ago