ಕೊಡಗು : ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ ಏರಿಕೆಯಾಗಿದೆ. ಕುಶಾಲನಗರದ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಜಲಾಶಯದಿಂದ ಶನಿವಾರ 4 ಕ್ರೆಸ್ಟ್ ಗೇಟ್ಗಳ ಮೂಲಕ 20,000 ಕ್ಯೂಸೆಕ್ ನೀರು ಹೊರಬಿಡಲಾಗಿದೆ.ಹಂತಹಂತವಾಗಿ ಹೆಚ್ಚುವರಿ ನೀರು ಹರಿಸಲಾಗುವುದು. ನದಿಗೆ ನೀರು ಬಿಟ್ಟಿರುವ ಕಾರಣ ನದಿಪಾತ್ರದಲ್ಲಿ ವಾಸಿಸುವ ಜನರು ನೀರಿಗಿಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಇಂಜಿನಿಯರ್ ತಿಳಿಸಿದರು.
ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಮುಳುಗಡೆ: ದಕ್ಷಿಣ ಕನ್ನಡದ ಜಿಲ್ಲೆಯ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಮ್ಯಣ್ಯದಲ್ಲಿ ಕುಮಾರಧಾರ ನದಿ ತುಂಬಿ ಹರಿಯುತ್ತಿದೆ. ದೇವಾಲಯದ ಸ್ನಾನಘಟ್ಟ ಮುಳುಗಡೆಯಾಗಿದೆ.



