ನದಿ, ಹಳ್ಳ ತುಂಬಿ ಹರಿಯುತ್ತಿದ್ದು ಅಪಾಯಕಾರಿಯಾಗಿದೆ. ಈ ಕಾಲು ಸಂಕದ ಮೂಲಕ ದಾಟಬೇಡಿ ಎಂದು ಇರ್ವತ್ತೂರು ಗ್ರಾ.ಪಂ.ಅಧಿಕೃತ ಆದೇಶದ ಬ್ಯಾನರ್ ಅಳವಡಿಸಲಾಗಿದೆ. ಮೂಡುಪಡುಕೋಡಿ ಗ್ರಾಮದ ಅಗರ್ದಬೈಲು ಎಂಬಲ್ಲಿ ಕಾಲು ಸಂಕವಿದೆ. ಈ ಕಾಲು ಸಂಕದ ಮೂಲಕ ಬಾಂಬಿಲ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ.
ಮಳೆಗಾಲ ಅರಂಭವಾಗುತ್ತಿದ್ದ0ತೆ ಜಿಲ್ಲಾ ವಿಪತ್ತು ನಿರ್ವಹಣಾ ತಂಡದಿ0ದ ಜಾಗೃತಿಯನ್ನು ಮೂಡಿಸುವ ಮತ್ತು ಅಪಾಯಕಾರಿ ಸನ್ನಿವೇಶಗಳು ಕಂಡು ಬಂದಲ್ಲಿ ಸ್ಥಳೀಯ ಆಡಳಿತದ ಮೂಲಕ ಎಚ್ಚರಿಸುವ ಕಾರ್ಯ ನಡೆಯುವುದು ನಿರಂತರವಾಗಿ ನಡೆಯುತ್ತಾ ಬಂದಿದೆ. ಅಪಾಯಕಾರಿ ಕಾಲು ಸಂಕದಲ್ಲಿ ದಾಟುವುದನ್ನು ನಿಷೇಧಿಸಲಾಗಿದೆ ಎಂದು ಇರ್ವತ್ತೂರು ಗ್ರಾ.ಪಂ.ಎಚ್ಚರಿಕೆ ಫಲಕವನ್ನು ಹಾಕಿರುವುದರ ವಿರುದ್ದ ಗ್ರಾಮಸ್ಥರು ಗರಂ ಆಗಿದ್ದು ಇದರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವೈರಲ್ ಮಾಡಿದ್ದಾರೆ. ಪ್ರತಿ ಮಳೆಗಾಲದಲ್ಲಿ ಈ ಕಾಲು ಸಂಕದ ಮೇಲೆ ನೀರು ಬರುತ್ತಿದ್ದು, ಎತ್ತರದ ಮತ್ತು ವಾಹನ ಓಡಾಟಕ್ಕೆ ಅನುಕೂಲಕರವಾದ ಸಂಕವನ್ನು ಮಾಡಿಕೊಡಿ ಎಂಬುದು ಇಲ್ಲಿನ ಗ್ರಾಮಸ್ಥರ ಬೇಡಿಕೆಯಾಗಿದೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…