16 ನೇ ಹಣಕಾಸಿನ ಆಯೋಗಕ್ಕೆ ಹೆಚ್ಚುವರಿ ಮನವಿಯನ್ನು ಸಲ್ಲಿಸುವುದರ ಜೊತೆ ಜೊತೆಗೆ ಒಕ್ಕೂಟದ ವ್ಯವಸ್ಥೆಯನ್ನು ಬಲಪಡಿಸಿ ಎಲ್ಲಾ ರಾಜ್ಯಗಳಿಗೂ ನ್ಯಾಯ ಒದಗಿಸಬೇಕು ಎಂಬುವುದನ್ನ ಹೇಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇವರು 16 ನೇ ಹಣಕಾಸಿನ ಆಯೋಗದ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತಾನಾಡಿದ್ರು. 16 ನೇ ಹಣಕಾಸಿನ ಆಯೋಗದ ಅಧ್ಯಕ್ಷ ಅರವಿಂದ ಪರಗಾರಿಯಾ ಮತ್ತು ಸದಸ್ಯರನ್ನು ಭೇಟಿಯಾಗಿ ಹೆಚ್ಚುವರಿ ಜ್ಞಾಪನಾ ಪತ್ರವನ್ನು ಆಯೋಗಕ್ಕೆ ಸಲ್ಲಿಸಲಾಗಿದೆ. 2011-2012 ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದಾರೆ. 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟುಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5ರಷ್ಟಿದ್ದೇವೆ. 5 ವರ್ಷಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಸಂವಿಧಾನದ ಅನುಚ್ಛೇದ 180 ಪ್ರಕಾರ ತೆರಿಗೆ ಹಂಚಿಕೆಯಾಗಬೇಕೆAದು ಹೇಳಲಾಗಿದ್ದು ಯಾರಿಗೂ ಅನ್ಯಾಯವಾಗಬಾರದೆಂದು ಸ್ಪಷ್ಟಪಡಿಸಿದೆ ಎಂದಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…