ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್‌ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್‌ಎಂಪಿಎ ಕಾರ್ಯದರ್ಶಿ ನನ್ನ ವಿರುದ್ಧ ಸುಳ್ಳು ದೂರು ನೀಡಿದ್ದು ಯಾಕೆ? ಚೇರ್‌ಮೆನ್ ಒತ್ತಡದಿಂದ ಸೆಕ್ರಟರಿ ಮತ್ತು ಲೀಗಲ್ ಅಡ್ವಕೇಟರ್ ನನ್ನ ಮೇಲೆ ಸುಳ್ಳು ಕೇಸ್ ಹಾಕಿಸಿದ್ದಾರೆ.
ಹಾಗಾಗಿ ಡೆಪ್ಯುಟಿ ಚೇರ್ ಮೆನ್ ವಿರುದ್ಧ 24 ಕೋಟಿ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಸುರತ್ಕಲ್ ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ ಎಚ್ಚರಿಕೆ ನೀಡಿದ್ದಾರೆ. ತನ್ನ ಮೇಲೆ ಎನ್‌ಎಂಪಿಎ ಅಧಿಕಾರಿಗಳು ಪ್ರಕರಣ ದಾಖಲಿಸಿರುವ ಕುರಿತು ಮಂಗಳೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಸ್ಪಷ್ಟನೆ ನೀಡಿದ ಅವರು, ಒಂದು ವೇಳೆ ನಾನು ಅಧಿಕಾರಿಯ ಜೊತೆ ಅನಾಗರಿಕವಾಗಿ ವರ್ತಿಸಿದ್ದರೆ ಅಲ್ಲಿನ ಸಿಸಿಟಿವಿ ಚೆಕ್ ಮಾಡಲಿ, ನಾನು ಮೇಡಂ ಜೊತೆ ಕೈ ಮುಗಿದು ಸೌಜನ್ಯಯುತವಾಗಿ ಬೀಳ್ಕೊಟ್ಟು ಬಂದಿದ್ದೇನೆ. ಆವರು ನನ್ನ ಅಕ್ಕನ ಸಮಾನ. ಒಂದು ವೇಳೆ ಆರೋಪ ಸಾಬೀತಾದರೆ ಗಲ್ಲಿಗೇರಲೂ ರೆಡಿ ಇದ್ದೇನೆ ಎಂದು ಬಾವಾ ಗುಡುಗಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…