ಹಿ0ದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು ಹತ್ಯಾ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ವಾರದ ಹಿಂದೆಯಷ್ಟೇ ಈ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್.ಐ.ಎ.ಗೆ ವಹಿಸಿತ್ತು. ಬೆಂಗಳೂರು ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದು ಮಾಹಿತಿ ಕಲೆ ಹಾಕುತ್ತಿದ್ದಾರೆ. ಡಿ.ವೈ.ಎಸ್.ಪಿ. ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಸಬ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ಮಂಗಳೂರು ಸಿ.ಸಿ.ಬಿ. ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಹಿಂದೆ ಪಿ.ಎಫ್.ಐ. ಕಾರ್ಯಕರ್ತರು ಇರಬಹುದೆಂಬ ಗುಮಾನಿ ವ್ಯಕ್ತಪಡಿಸಿ ಹಿಂದೂ ಸಂಘಟನೆಗಳು ಎನ್.ಐ.ಎ. ತನಿಖೆಗೆ ಆಗ್ರಹಿಸಿದ್ದವು. ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕೂಡಾ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆದು ನಿಷೇಧಿತ ಪಿ.ಎಫ್.ಐ. ಸಂಘಟನೆಯ ಕೈವಾಡ ಇದರ ಹಿಂದೆ ಇರಬಹುದಾದ ಶಂಕೆಯನ್ನು ವ್ಯಕ್ತಪಡಿಸಿ ಎನ್.ಐ.ಎ. ತನಿಖೆಗೆ ಒತ್ತಾಯಿಸಿದ್ರು. ಇತ್ತ ನಿನ್ನೆ ಮಂಗಳೂರಿಗೆ ಬಂದಿದ್ದ ರಾಜ್ಯ ಗೃಹ ಸಚಿವರಾದ ಡಾ. ಪರಮೇಶ್ವರ್ ಎನ್.ಐ.ಎ. ತನಿಖೆ ಕೊಟ್ಟಿದ್ದಾರೆ, ನಾವು ಹಸ್ತಕ್ಷೇಪ ಮಾಡುವುದಿಲ್ಲ ಎಂದಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…