ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿಯಲ್ಲಿ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದು ಓರ್ವ ಮೃತ್ಯು

ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಸಂಭವಿಸಿದೆ.

ಮೃತರನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ. ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಮಾಲೀಕನ ಸಹೋದರ ಫ್ರಾನಿಸ್ಸ್ ಹಾಗೂ ಕೆಲಸದಾಕೆ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರಿಶೀಲಿಸಲು ಕ್ರೇನ್‌ನಲ್ಲಿ ಹೋಗಿದ್ದು, ಈ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ತಕ್ಷಣವೇ ಧಾವಿಸಿ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಇಬ್ಬರು ಬಿದ್ದು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ರಕ್ಷಣೆಗೆ ಬಾರದೆ ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!