ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಕೋರ್ಟ್ ಹಿಂಭಾಗ ರಸ್ತೆಯ ಲೋಕೋಪಯೋಗಿ ಇಲಾಖೆ ಕಚೇರಿ ಬಳಿ ಸಂಭವಿಸಿದೆ.
ಮೃತರನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಇವರು ಮನೆ ಮಾಲೀಕರ ಸಹೋದರ ಎಂದು ತಿಳಿದುಬಂದಿದೆ. ಮನೆ ಕೆಲಸದಾಕೆ ಮಲ್ಪೆ ಕಲ್ಮಾಡಿ ನಿವಾಸಿ ಶಾರದಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆ ಮಾಲೀಕನ ಸಹೋದರ ಫ್ರಾನಿಸ್ಸ್ ಹಾಗೂ ಕೆಲಸದಾಕೆ ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರಿಶೀಲಿಸಲು ಕ್ರೇನ್‌ನಲ್ಲಿ ಹೋಗಿದ್ದು, ಈ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಘಟನೆ ತಿಳಿದ ತಕ್ಷಣವೇ ಧಾವಿಸಿ ಬಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಸ್ಥಳೀಯರ ಸಹಕಾರದೊಂದಿಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ರು. ಇಬ್ಬರು ಬಿದ್ದು ನರಳಾಡುತ್ತಿದ್ದರೂ, ಕ್ರೇನ್ ಚಾಲಕ ರಕ್ಷಣೆಗೆ ಬಾರದೆ ಕ್ರೇನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…