ಕರಾವಳಿ

ಮುಲ್ಕಿ: ಯುವವಾಹಿನಿ ಘಟಕದ ಆಶ್ರಯದಲ್ಲಿಆಟಿದೊಂಜಿ ದಿನ ದ ಗೌಜಿ

ಮುಲ್ಕಿ: ಯುವವಾಹಿನಿ ಘಟಕದ ಆಶ್ರಯದಲ್ಲಿ 21ನೇ ವರ್ಷದ ಆಟಿದೊಂಜಿ ದಿನ ಕಾರ್ಯಕ್ರಮವು ಭಾನುವಾರ ಬೆಳಿಗ್ಗೆ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷ ಮಾಧವ ಪೂಜಾರಿ ಕಿಲ್ಪಾಡಿ ವಹಿಸಿದ್ದರು.
ಕಾರ್ಯಕ್ರಮವನ್ನು ಉದ್ಯಮಿ ಶೈಲೇಂದ್ರ ವೈ ಸುವರ್ಣ ರವರು ಹಿಂದಿನ ಕಾಲದ ನಿರ್ಮಾಣಗೊಂಡ ಅಡುಗೆ ಕೋಣೆಯ ಒಳಗಡೆ ಒಲೆಯಲ್ಲಿಟ್ಟ ಪಾತ್ರೆಯಲ್ಲಿ ಬೆಂದ ಹಲಸಿನ ಗಟ್ಟಿಯನ್ನು ಅತಿಥಿಗಳಿಗೆ ನೀಡುವ ಮೂಲಕ ಉದ್ಘಾಟಿಸಿ ಮಾತನಾಡಿ ಸಂಘಟನೆಗಳ ಯಶಸ್ವಿ ಕಾರ್ಯಕ್ರಮಗಳಿಗೆ ಹಿರಿಯರ ಶ್ರಮ ಅಪಾರವಾಗಿದ್ದು ಮುಲ್ಕಿಯ ಯುವ ವಾಹಿನಿ ಸಂಘಟನೆಯು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ಪಾಲಿಸಿಕೊಂಡು ಯುವ ಜನಾಂಗವನ್ನು ಸಂಘಟಿಸಿ ಸಮಾಜದ ಅಭಿವೃದ್ಧಿಗೆ ಕೊಡುಗೆ ಶ್ಲಾಘನೀಯ ಎಂದರು.


ತುಳು ಚಿತ್ರ ರಂಗದ ಕಲಾವಿದ ಭೋಜರಾಜ್ ವಾಮಂಜೂರು ರವರು ಮಾತನಾಡಿ ಮುಲ್ಕಿ ಯುವವಾಹಿನಿ ಘಟಕವು ಹಿಂದಿನ ಕಾಲದ ಪರಂಪರೆ, ಸಂಸ್ಕಾರ ಸಂಸ್ಕೃತಿ ಉಳಿಸಿಕೊಂಡು ಸಮಾಜದಲ್ಲಿ ಅಸಹಾಯಕರಿಗೆ ಸಹಾಯ ಹಸ್ತದ ಮೂಲಕ ಉತ್ತಮ ಕಾರ್ಯಕ್ರಮಗಳು ಅಭಿನಂದನೀಯ ಎಂದರು.
ಆಟಿಯ ಆಚರಣೆ ಕುರಿತು ಮಂಗಳೂರಿನ ಸಂತ್ ಅಗ್ನೇಸ್ ಕಾಲೇಜಿನ ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಉಪನ್ಯಾಸ ನೀಡಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ರಾಜೇಶ್ ಬಿ,ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಪಯರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಎಂ ಪ್ರಕಾಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತುಳು ಚಿತ್ರ ನಿರ್ಮಾಪಕ ಸಂದೇಶ್ ರಾಜ್ ಬಂಗೇರರನ್ನು ಸನ್ಮಾನಿಸಲಾಯಿತು.
ಆಟಿಯ ಆಚರಣೆಗೆ ಬಂದ ಅತಿಥಿಗಳಿಗೆ ಅರೆಪುದಡ್ಡೆ, ಚಾ, ಬಾಯಿ ಬಚ್ಚೆಲ್, ಕಡ್ಲೆ, ಹಪ್ಪಳ, ಮಧ್ಯಾಹ್ನ ಆಟಿದ ಅಟಿಲ್‌ನಲ್ಲಿ ಕುಕ್ಕುದ ಉಪ್ಪಡ್, ತಿಮರೆ ಚಟ್ನಿ, ಉಪ್ಪಡ್ ಪಚ್ಚೀರ್, ಕುಡುತ್ತ ಚಟ್ನಿ, ಕುಕ್ಕುದ ಚಟ್ನಿ, ತೊರ್ಜಕ್ ನುರ್ಗೆ ಸೊಪ್ಪು, ತೇವು ತೇಟ್ಲ, ಕುಡುತ ಸಾರ್, ತೇವು ಪದ್ಪೆ, ಪೆಲಕಾಯಿದ ಗಟ್ಟಿ, ಮೆತ್ತೆದ ಗಂಜಿಯ ತಿನಿಸುಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಟಿಯ ಸಂಭ್ರಮ ಕ್ಕೆ ಸಾಕ್ಷಿಯಾಯಿತು. ಚಲನಚಿತ್ರ ನಟ ಭೋಜರಾಜ ವಾಮಂಜೂರು ತುಳು ಪದ್ಯ ಹಾಡಿ ಮನರಂಜನೆ ನೀಡಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

10 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

10 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

10 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

10 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

10 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

10 hours ago