ಖಾಸಗಿ ಸಂಸ್ಥೆಯ ವಿದ್ಯಾರ್ಥಿಗಳಿದ್ದ ದೇರಳಕಟ್ಟೆ ಜಂಕ್ಷನ್ನಿನಲ್ಲಿರುವ ಕಟ್ಟಡದಲ್ಲಿ ವಿದ್ಯುತ್ ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ತಗಲಿದ್ದು, ಕಟ್ಟಡದೊಳಗಿದ್ದ 140 ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.
ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದಾರೆ. ಸಂಜೆ 7.45ರ ಹೊತ್ತಿಗೆ ಕಟ್ಟಡದ ನೆಲಮಹಡಿಯಲ್ಲಿರುವ ಸ್ವಿಚ್ ಬೋರ್ಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಬೆಂಕಿ ಹರಡಲು ಆರಂಭವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಸ್ಥಳೀಯರು ಎದುರುಗಡೆಯಿದ್ದ ಪೆಟ್ರೋಲ್ ಪಂಪ್ ನಿಂದ ಬೆಂಕಿ ನಂದಿಸಲು ಉಪಯೋಗಿಸುವ ಸಾಮಗ್ರಿಗಳ ಸಹಾಯದಿಂದ ಬೆಂಕಿ ನಂದಿಸಲು ಆರಂಭಿಸಿದ್ದಾರೆ. ತಕ್ಷಣ ಕಟ್ಟಡದ ಮೇಲಿದ್ದ 140 ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರ ತಂದಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ತಡವಾಗಿ ಆಗಮಿಸಿದ್ದರಿಂದಾಗಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ರು.
ಅದಾಗಲೇ ಬೆಂಕಿಯನ್ನು ನಂದಿಸುವಲ್ಲಿ ಸ್ಥಳೀಯರು ಸಫಲರಾಗಿದ್ದು, ವಿದ್ಯಾರ್ಥಿನಿಯರೆಲ್ಲರನ್ನೂ ಶಿಕ್ಷಣ ಸಂಸ್ಥೆ ಬೇರೆ ವಿದ್ಯಾರ್ಥಿನಿ ನಿಲಯಗಳಿಗೆ ಸ್ಥಳಾಂತರಿಸಿದ್ದಾರೆ. ವೇಣುಗೋಪಾಲ್ ಶೆಟ್ಟಿ ಎಂಬವರಿಗೆ ಸೇರಿದ ವೆಂಕಟ್ ರೆಸಿಡೆನ್ಸಿ ಐದು ಮಹಡಿಯ ಕಟ್ಟಡದ ಕೆಳಗಿನ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಘಟನಾ ಸ್ಥಳದಲ್ಲಿ ಅಗ್ನಿ ಶಾಮಕ ದಳ ಹಾಗೂ ಕೊಣಾಜೆ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…