ರಾಷ್ಟ್ರೀಯ ಹೆದ್ದಾರಿ 75ರ ಲಾವತಡ್ಕ ಎಂಬಲ್ಲಿ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.ಕಾರ್ಕಳದಿಂದ ಧರ್ಮಸ್ಥಳ ಮೂಲಕ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸು, ಲಾವತಡ್ಕ ಬಳಿ ಹೆದ್ದಾರಿ ಬದಿಯಲ್ಲಿ ನಿಂತಿದ್ದ ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಲಾರಿಗೆ ಹಿಂಬದಿ0ದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಈ ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಾಯಗೊಂಡವರ ಪೈಕಿ ಶಂಕರನಾರಾಯಣ ಭಟ್, ಕಾರ್ಕಳದ ಪಡುಮನೆ ನಿವಾಸಿಯಾಗಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಅವರು ಮೃತರಾಗಿದ್ದಾರೆ. ಈ ಪೈಕಿ ಐವರು ಗಂಭೀರ ಗಾಯಗೊಂಡಿದ್ದು, ತಕ್ಷಣ 5 ಮಂದಿ ಮಂಗಳೂರಿನ ಎಜೆ ಆಸ್ಪತ್ರೆ ಹಾಗೂ 4 ಮಂದಿ ಇಂಡಿಯನ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಕೆಲವರನ್ನು ಪುತ್ತೂರಿನ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…