ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್‌ಗೆ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ನಲ್ಲಿ ಬೆದರಿಕೆ ಹಾಕಿದ ಘಟನೆ ನಡೆದಿದೆ.
ಶಾಲೆಗೆ ಈ ಬಗ್ಗೆ ಇಮೇಲ್ ಬಂದಿದ್ದು, ತಕ್ಷಣ ಪೊಲೀಸರಿಗೆ ವಿಷಯ ತಿಳಿಸಲಾಯಿತು. ಸ್ಥಳಕ್ಕೆ ಧಾವಿಸಿದ ಉಡುಪಿ ನಗರ ಪೊಲೀಸರು ಇಡೀ ಶಾಲೆಯನ್ನು ಸುಪರ್ದಿಗೆ ಪಡೆದು, ಶ್ವಾನ ದಳ ಮತ್ತು ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ರೀತಿಯ ಸ್ಫೋಟಕ ವಸ್ತುಗಳು ಕಂಡುಬ0ದಿಲ್ಲ. ಇದೊಂದು ಹುಸಿ ಇ-ಮೇಲ್ ಬೆದರಿಕೆ ಕರೆ ಆಗಿರುವುದರಿಂದ, ಇಡೀ ಶಾಲೆಯನ್ನು ಪರಿಶೀಲಿಸಿ, ಆಡಳಿತ ಮಂಡಳಿಗೆ ಬಿಟ್ಟುಕೊಡಲಾಗಿದೆ. ಈ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…