ಬಂಟ್ವಾಳ: ಬಂಟರ ಸಂಘ, ವಾಮದ ಪದವು ವಲಯದ ವತಿಯಿಂದ ‘ಪದವುಡು ಆಟಿದ ಕೂಟ’ ಅದ್ದೂರಿ ಕಾರ್ಯಕ್ರಮ 23-07-2023ರ ರವಿವಾರ ನಡೆಯಿತು. . ವಾಮದಪದವಿನ ಆಲದಪದವಿನ ರಾಯಿ-ಮೂರ್ಜೆ ರಸ್ತೆ ಬಳಿಯ ಸಂಘದ ನಿವೇಶನದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕಾರ್ಯಕ್ರಮ ಉದ್ಘಾಟಿಸಿದರು. ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಡಾ. ಎಂ. ಮೋಹನ್ ಆಳ್ವಾ ಅಧ್ಯಕ್ಷತೆ ವಹಿಸಿದರು. ಮಾಣಿ ವಲಯ ಬಂಟರ ಸಂಘದ ಉಪಾಧ್ಯಕ್ಷರು, ಕವಯತ್ರಿ ಹಾಗೂ ಬರಹಗಾರ್ತಿ ವಿಂದ್ಯಾ ಎಸ್. ರೈಯವರು ಮುಖ್ಯ ಭಾಷಣಕಾರರಾಗಿ ಉಪನ್ಯಾಸ ನೀಡಿದರು.
ಮಾಜಿ ಸಚಿವ ಬಿ, ರಮಾನಾಥ ರೈ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕ ಸೀತಾರಾಮ್ ರೈ ಸವಣೂರು, ಬೆಳ್ತಂಗಡಿಯ ವಿಜಯ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯರಾಮ್ ಶೆಟ್ಟಿ, ವಾಮದಪದವು ಟಿಎಸ್‍ಎನ್ ಇಂಡಸ್ಟ್ರೀಸ್ ಮಾಲಕ ಧೀರಜ್ ನಾಯ್ಕ್, ಬಂಟ್ವಾಳ ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ ಬದಿಗುಡ್ಡೆ, ಕೋಶಾಧಿಕಾರಿ ಲೋಕೇಶ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ರಮಾ ಎಸ್. ಭಂಡಾರಿ, ಮಾಜಿ ಅಧ್ಯಕ್ಷ ಕಿರಣ್ ಹೆಗ್ಡೆ, ಕಾವಳಕಟ್ಟೆ ವಲಯ ಬಂಟರ ಸಂಘದ ಗೌರವಾಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ತಾಲೂಕು ಬಂಟರ ಸಂಘದ ಯುವ ಘಟಕದ ಅಧ್ಯಕ್ಷ ನಿಶಾನ್ ಆಳ್ವ ಮುಂತಾದವರು ಅತಿಥಿಗಳಾಗಿ ಭಾಗವಹಿಸಿದರು.
ವಲಯದ ಹಿರಿಯ ಬಂಟ ಬಂಧುಗಳಿಗೆ ಸನ್ಮಾನ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಮಕ್ಕಳಿಂದ ಹಾಡು, ನೃತ್ಯ, ಯಕ್ಷಗಾನದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…