ಮಳೆಗಾಲ ಬಂದರೆ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳಿಗೆ ಸಂಕಷ್ಟ ಎದುರಾಗುತ್ತದೆ. ತಗ್ಗು ಪ್ರದೇಶದಲ್ಲಿ ನೀರು ನಿಲ್ಲುವುದರಿಂದ ಜಿಂಕೆ, ಕಾಡು ಕೋಣ, ಕರಡಿ, ಮಂಗಗಳು ಇನ್ನಿತರ ಪ್ರಾಣಿಗಳಿಗೆ ಅಲ್ಲಿ ಸರಿಯಾದ ವ್ಯವಸ್ಥೆ ಇಲ್ಲ. ಈ ಬಾರಿಯೂ ಮೃಗಾಲಯದ ಒಳಗಡೆ ನೀರು ಶೇಖರಣೆಯಾಗಿದ್ದು, ಪ್ರಾಣಿಗಳು ಒದ್ದೆಯಾಗಿ ಸಂಕಷ್ಟ ಪಡುತ್ತಿರುವುದು ಕಂಡುಬ0ದಿದೆ.
ಇದಲ್ಲದೆ, 2-3 ದಿನದಿಂದ ಪ್ರಾಣಿಗಳಿಗೆ ಆಹಾರ ಕೊಡುವುದರಲ್ಲಿಯೂ ವ್ಯತ್ಯಯ ಉಂಟಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಪಿಲಿಕುಳ ಪ್ರಾಧಿಕಾರದ ಪ್ರಭಾರ ಆಯುಕ್ತರೂ, ಪಶು ಸಂಗೋಪನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಅವರಲ್ಲಿ ಕೇಳಿದಾಗ, ಒಂದನೇದಾಗಿ ಮೃಗಾಲಯ ತಗ್ಗಿನ ಜಾಗದಲ್ಲಿದ್ದು ಅದರಿಂದಾಗಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿದೆ. ಅದನ್ನು ಸರಿಪಡಿಸುತ್ತಿದ್ದೇವೆ. ಜೊತೆಗೆ, ಈ ಬಾರಿ ಎರಡು ಕಡೆ ತಡೆಗೋಡೆ ಕುಸಿತಗೊಂಡು ನೀರು ಶೇಖರಣೆಯಾಗಿದೆ. ಪ್ರಾಣಿಗಳಿಗೆ ಆಹಾರ ನೀಡಿಕೆಯಲ್ಲಿ ವ್ಯತ್ಯಯ ಆಗಿಲ್ಲ. ವೆಜಿಟೇಬಲ್ ಆಹಾರ ಎಂದಿನ0ತೆ ನೀಡುತ್ತಿದ್ದೇವೆ. ಸಸ್ಯಾಹಾರಿ ಪ್ರಾಣಿಗಳ ಬೂಸಾ ನೀಡಿಕೆಯಲ್ಲಿ ವ್ಯತ್ಯಯ ಆಗಿದ್ದು ಅದನ್ನು ಸರಿಪಡಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…