ಧಾರಾಕಾರ ಮಳೆಯ ನಡುವೆ ಭೂಮಿಕಂಪಿಸಿದ ಅನುಭವ ವಾದ ಘಟನೆ ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ನಡೆದಿದ್ದು, ಸಂಬ0ದ ಪಟ್ಟ ಇಲಾಖಾಧಿಕಾರಿಗಳು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಕನ್ಯಾನ ಗ್ರಾಮದ ಮಂಡ್ಯೂರು ಎಂಬಲ್ಲಿ ಜನರಿಗೆ ಒಂದು ಕ್ಷಣಕ್ಕೆ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಭುಮಿ ಕಂಪಿಸಿದ ಅನುಭವ ಕೇವಲ ಒಂದೆರಡು ಸೆಕೆಂಡ್ ಮಾತ್ರ ಉಂಟಾಗಿದೆ. ಈ ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ಹರಿಯಬಿಟ್ಟಿದ್ದು, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗ್ರಾಮ ಕರಣಿಕ ಅನಿಲ್ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ನಡೆದ ಪ್ರದೇಶದ ಮನೆಗಳಿಗೆ ಭೇಟಿ ನೀಡಿದ್ದು, ಯಾವುದೇ ಮನೆಯಲ್ಲಿ ಹಾನಿಯಾಗಿರುವ ಬಗ್ಗೆ ಕಂಡು ಬಂದಿಲ್ಲ. ಮುಂದೆ ಇಂತಹ ಅನುಭವ ವಾದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಅಧಿಕಾರಿಗಳು ಸ್ಥಳೀಯರಿಗೆ ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…