ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕಾರೊಂದು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಸಾವು

ಕಾರೊಂದು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪ0ಪ್‌ವೆಲ್ ನಡುವೆ ನಡೆದಿದೆ. ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಅಲ್ಲಿಯೇ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಮೊಹಮ್ಮದ್ ಅಮಲ್ (29) ಮೃತಪಟ್ಟವರು.

ನಂತೂರಿನ ತಾರೆತೋಟ ಬಳಿ ಘಟನೆ ನಡೆದಿದ್ದು, ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸ್ಕಿಡ್ ಆಗಿ ಡಿವೈಡರ್‌ಗೆ ಬಡಿದು ಬಳಿಕ ಮೂರು ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ಘಟನೆ ವೇಳೆ ಹಿಂದಿನಿ0ದ ಬರುತ್ತಿದ್ದ ಲೋಡ್ ತುಂಬಿದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ರಸ್ತೆಯಲ್ಲೇ ಪಲ್ಟಿಯಾಗಿದೆ. ಇನ್ನು ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!