ಕಾರೊಂದು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪ0ಪ್‌ವೆಲ್ ನಡುವೆ ನಡೆದಿದೆ. ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಅಲ್ಲಿಯೇ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಮೊಹಮ್ಮದ್ ಅಮಲ್ (29) ಮೃತಪಟ್ಟವರು.
ನಂತೂರಿನ ತಾರೆತೋಟ ಬಳಿ ಘಟನೆ ನಡೆದಿದ್ದು, ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸ್ಕಿಡ್ ಆಗಿ ಡಿವೈಡರ್‌ಗೆ ಬಡಿದು ಬಳಿಕ ಮೂರು ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದರು. ಕಾರಿನಲ್ಲಿದ್ದ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ಘಟನೆ ವೇಳೆ ಹಿಂದಿನಿ0ದ ಬರುತ್ತಿದ್ದ ಲೋಡ್ ತುಂಬಿದ ಲಾರಿಯೊಂದರ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ರಸ್ತೆಯಲ್ಲೇ ಪಲ್ಟಿಯಾಗಿದೆ. ಇನ್ನು ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…