ಕಳೆದ ಎರಡೂವರೆ ವರ್ಷಗಳಿಂದ ದಕ್ಷಿಣಕನ್ನಡ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ದ ಮುಲ್ಲೈ ಮುಗಿಲನ್ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಕಳೆದ ಎರಡೂವರೆ ವರ್ಷ ಮುಲ್ಲೈ ಮುಗಿಲನ್ ಅವರು ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಯಾವುದೇ ವಿವಾದಗಳಿಗೆ ಸಿಲುಕದೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಿದ್ರು. ಅಲ್ಲದೆ ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭ ಅತೀ ಹೆಚ್ಚು ರಜೆ ಕೊಟ್ಟು ಶಾಲೆ ಮಕ್ಕಳಲ್ಲೂ ರಜೆ ಕೊಡುವ ಜಿಲ್ಲಾಧಿಕಾರಿಯಾಗಿ ಹೆಸರು ಮಾಡಿದ್ರು. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಎಚ್.ವಿ ಅವರನ್ನು ನೇಮಕ ಮಾಡಲಾಗಿದೆ. ಅವರು ಬೆಂಗಳೂರಿನಲ್ಲಿ ಕಮರ್ಶಿಯಲ್ ಟ್ಯಾಕ್ಸ್ ವಿಭಾಗದ ಎಡಿಷನಲ್ ಕಮಿಷನರ್ ಹುದ್ದೆಯಲ್ಲಿದ್ರು ಎಂದು ತಿಳಿದು ಬಂದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…