ಶಾಲಾ ಬಸ್ಸಿಗೆ ಹಿಂಬದಿಯಿ0ದ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ಸಂಭವಿಸಿದೆ.

ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿ0ದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವ ಸಂದರ್ಭದಲ್ಲಿ ಹಿಂದಿನಿ0ದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಅಪಘಾತದಿಂದ ಹಲವು ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಪಘಾತಕ್ಕೆ ಶಾಲಾ ಬಸ್ ಚಾಲಕನ ನಿರ್ಲಕ್ಷವೇ ಕಾರಣ ಎಂದು ತಿಳಿದುಬಂದಿದೆ. ಬ್ರಹ್ಮಾವರ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



